ನವದೆಹಲಿ:ಎರಡು ದಿನಗಳ ಭಾರತದ ಪ್ರವಾಸದಲ್ಲಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಇಂದು ಪ್ರಧಾನಿ ನರೇಂದ್ರ ಮೋದಿ ಜೊತೆ ಮಹತ್ವದ ಮಾತುಕತೆಯಲ್ಲಿ ಭಾಗಿಯಾದರು. ಈ ವೇಳೆ ಭಾರತದಲ್ಲೇ ತಯಾರುಗೊಂಡಿರುವ ಕೋವಿಡ್ ಲಸಿಕೆಯನ್ನು ತಾವು ಪಡೆದುಕೊಂಡಿರುವ ವಿಚಾರ ಬಹಿರಂಗಪಡಿಸಿದರು. ಹೈದರಾಬಾದ್ ಹೌಸ್ನಲ್ಲಿ ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆಸಿದ ಬೋರಿಸ್, ಕೋವಿಡ್ ಲಸಿಕೆ ವಿಚಾರವಾಗಿ ಮಾತನಾಡುತ್ತಾ, 'ನನ್ನ ತೋಳಿಗೆ ಭಾರತದ ಕೋವಿಡ್ ಲಸಿಕೆ ಹಾಕಲಾಗಿದೆ. ಇದಕ್ಕಾಗಿ ನಾನು ಭಾರತಕ್ಕೆ ಧನ್ಯವಾದ ತಿಳಿಸುತ್ತೇನೆ' ಎಂದರು.
ಭಾರತ-ಇಂಗ್ಲೆಂಡ್ ನಡುವಿನ ಸಂಬಂಧ ಈ ಹಿಂದಿನಿಗಿಂತಲೂ ಇದೀಗ ಬಹಳ ಗಟ್ಟಿಯಾಗಿದೆ. ಭಾರತದಲ್ಲಿ ಸಾಫ್ಟ್ವೇರ್ ಇಂಜಿನಿಯರಿಂಗ್ನಿಂದ ಆರೋಗ್ಯ ಕ್ಷೇತ್ರದಲ್ಲಿ 1 ಶತಕೋಟಿ ಮೌಲ್ಯದ ಹೂಡಿಕೆ ಮಾಡಲು ಸಿದ್ಧರಾಗಿದ್ದೇವೆ. ಭಾರತ ರಕ್ಷಣಾ ವಲಯ, ವ್ಯಾಪಾರ, ಹವಾಮಾನ ಸೇರಿದಂತೆ ಅನೇಕ ವಲಯಗಳ ಕುರಿತಾಗಿ ಪ್ರಧಾನಿ ಜೊತೆ ಚರ್ಚಿಸಲಾಗಿದೆ ಎಂದು ಬೋರಿಸ್ ಹೇಳಿದರು.