ನೋಯ್ಡಾ/ನವದೆಹಲಿ:ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆಯೊಡ್ಡಿರುವ ಪ್ರಕರಣ ಮುನ್ನೆಲೆಗೆ ಬಂದಿದೆ. ಇ-ಮೇಲ್ನಲ್ಲಿ ಮಾಹಿತಿ ಪಡೆದ ಖಾಸಗಿ ಸುದ್ದಿ ವಾಹಿನಿಯ ಸಿಇಓ ನೋಯ್ಡಾದ ಸೆಕ್ಟರ್-20 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಈ ವೇಳೆ ಪೊಲೀಸರು ಸಂಬಂಧಿತ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಅಧಿಕಾರಿಗಳಿಂದ ಈವರೆಗೆ ಯಾವುದೇ ಹೇಳಿಕೆ ಹೊರಬಿದ್ದಿಲ್ಲ. ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅವರನ್ನು ಕೊಲ್ಲುವ ಬೆದರಿಕೆಯನ್ನು ಯುವಕನೊಬ್ಬ ಖಾಸಗಿ ಸುದ್ದಿ ವಾಹಿನಿಯ ಸಿಇಓಗೆ ಇ-ಮೇಲ್ ಮಾಡಿದ್ದಾನೆ.
ಇ-ಮೇಲ್ ಮೂಲಕ ಬಂತು ಬೆದರಿಕೆ ಪತ್ರ:ಪೊಲೀಸ್ ಠಾಣೆ ಸೆಕ್ಟರ್-20ರಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕಾರ್ತಿಕ್ ಸಿಂಗ್ ಎಂಬ ಯುವಕ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಪತ್ರ ಬರೆದಿದ್ದಾನೆ ಎಂದು ತಿಳಿದಿದೆ. ಈ ಕುರಿತು ಖಾಸಗಿ ಸುದ್ದಿ ವಾಹಿನಿಯ ಸಿಇಓ ನೀಡಿದ ದೂರಿನ ಆಧಾರದ ಮೇಲೆ ನೋಯ್ಡಾದ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಪೊಲೀಸರು ಎರಡು ತಂಡಗಳಾಗಿ ಆರೋಪಿ ಬಂಧನಕ್ಕೆ ಹುಡುಕಾಟ ನಡೆಸುತ್ತಿದ್ದಾರೆ.
ಸಿಇಓ ನೀಡಿದ ದೂರಿನ ಆಧಾರದ ಮೇಲೆ ಹಲವು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಠಾಣೆ ಸೆಕ್ಟರ್ 20ರ ಪ್ರಭಾರಿ ಇನ್ಸ್ಪೆಕ್ಟರ್ ಮನೋಜ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು. ಕಸ್ಟಡಿಯಲ್ಲಿರುವ ಕೆಲವರನ್ನು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.