ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ದೇಶದ ಜನರಿಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ.
ದೀಪಾವಳಿ ಹಿನ್ನೆಲೆ ಟ್ವೀಟ್ ಮಾಡಿರುವ ಮೋದಿ, ದೇಶದ ಜನರಿಗೆ ದೀಪಾವಳಿ ಹಬ್ಬದ ಶುಭಾಶಯಗಳು. ಈ ಬೆಳಕಿನ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ಹೊತ್ತು ತರಲಿ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದ್ದಾರೆ.
ಹಾಗೆಯೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹ ಟ್ವೀಟ್ ಮಾಡಿದ್ದು, ಈ ದೀಪಾವಳಿ ಶುಭ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳಿಗೆ ಶುಭಾಶಯ ತಿಳಿಸುತ್ತೇನೆ. ದೀಪಾವಳಿಯು ಕೆಡುಕಿನ ಮೇಲೆ ಒಳ್ಳೆಯದು, ಕತ್ತಲೆಯ ಮೇಲೆ ಬೆಳಕು ವಿಜಯಿಸುವ ಹಬ್ಬವಾಗಿದೆ. ನಾವೆಲ್ಲರೂ ಒಟ್ಟಾಗಿ ಈ ಹಬ್ಬವನ್ನು ಸುರಕ್ಷಿತವಾಗಿ ಆಚರಿಸೋಣ. ಪರಿಸರ ಸಂರಕ್ಷಿಸೋಣ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ರಜೌರಿಯ ನೌಶೇರಾ ಸೆಕ್ಟರ್‌ನ ಮುಂಭಾಗದ ಪ್ರದೇಶದಲ್ಲಿ ಯೋಧರೊಂದಿಗೆ ಈ ವರ್ಷದ ದೀಪಾವಳಿ ಆಚರಿಸಲಿದ್ದಾರೆ .