ನವದೆಹಲಿ:ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 17 ಮಂದಿ ಸಾವಿಗೀಡಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಕಂಬನಿ ಮಿಡಿದಿದ್ದಾರೆ. ಅಲ್ಲದೆ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಕಾನ್ಪುರ ಜಿಲ್ಲೆಯ ಸಚೆಂಡಿ ಪ್ರದೇಶದಲ್ಲಿ ಮಂಗಳವಾರ ಸಂಜೆ ದೆಹಲಿಯಿಂದ ಹೊರಟ ಬಸ್ ಹಾಗೂ ಜೆಸಿಬಿ ನಡುವಿನ ಅಪಘಾತದಲ್ಲಿ 17 ಜನರು ಸಾವನ್ನಪ್ಪಿ, 5 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ 'ಕಾನ್ಪುರದಲ್ಲಿ ನಡೆದ ರಸ್ತೆ ಅಪಘಾತವು ದುರಂತವಾಗಿದೆ. ಅಪಘಾತದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅವರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುವುದಾಗಿ' ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.
ಅಲ್ಲದೆ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಪಿಎಂಎನ್‌ಆರ್‌ಎಫ್ (ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ) ಇಂದ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ 50 ಸಾವಿರ ರೂ. ನೀಡುವುದಾಗಿ ಪ್ರಧಾನಿ ಕಚೇರಿ ಟ್ವೀಟ್ ಮೂಲಕ ತಿಳಿಸಿದೆ.
ಅಮಿತ್ ಶಾ ಸಂತಾಪ: