ನವದೆಹಲಿ:ಕೋವಿಡ್ ವ್ಯಾಕ್ಸಿನ್ ತಯಾರಿಸಲು ವಿಶ್ವ ವ್ಯಾಪಾರ ಸಂಸ್ಥೆಯಲ್ಲಿ ಬೌದ್ಧಿಕ ಆಸ್ತಿ ಹಕ್ಕುಗಳ ವ್ಯಾಪಾರ-ಸಂಬಂಧಿತ ಅಂಶಗಳನ್ನು (ಟಿಆರ್ಐಪಿಎಸ್) ಮನ್ನಾ ಮಾಡುವುದಕ್ಕೆ ಬೆಂಬಲಿಸುವಂತೆ ಯುರೋಪಿಯನ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
ಯುರೋಪಿಯನ್ ಕೌನ್ಸಿಲ್ ಸಭೆಯಲ್ಲಿ ವರ್ಚುವಲ್ ಮೂಲಕ ಭಾಗಿಯಾದ ಮೋದಿ, ಕೋವಿಡ್ ಸಂಬಂಧಿತ ಚಿಕಿತ್ಸೆಗಳು ಮತ್ತು ಲಸಿಕೆಗಳಿಗಾಗಿ ಬೌದ್ಧಿಕ ಆಸ್ತಿ ಹಕ್ಕುಗಳ ವ್ಯಾಪಾರ-ಸಂಬಂಧಿತ ಅಂಶಗಳನ್ನು ಮನ್ನಾ ಮಾಡಬೇಕಿದೆ. ಅದಕ್ಕಾಗಿ ಎಲ್ಲರ ಬೆಂಬಲ ಅಗತ್ಯವಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಇಯು ಕೌನ್ಸಿಲ್ ಚಾರ್ಲ್ಸ್ ಮಿಚೆಲ್, ಬೌದ್ಧಿಕ ಹಕ್ಕು ಮತ್ತು ವ್ಯಾಕ್ಸಿನ್ ಬಗ್ಗೆ ನಮ್ಮ ನಾಯಕರ ಜೊತೆ ಚರ್ಚಿಸಿದ್ದು, ಬೇರೆ ಬೇರೆ ಅಭಿಪ್ರಾಯಗಳು ಬಂದಿವೆ. ಆದರೂ ಕೂಡ ವ್ಯಾಕ್ಸಿನ್ ಉತ್ಪಾದನೆ ಮತ್ತು ಪೂರೈಕೆಗೆ ಸಹಕಾರಿಯಾಗುವಂತಹ ಯಾವುದೇ ನಡೆಗೆ ಬೆಂಬಲ ಸೂಚಿಸಲು ಸಿದ್ಧರಿದ್ದೇವೆ ಎಂದು ಭರವಸೆ ನೀಡಿದ್ದಾರೆ.