ಬೆಂಗಳೂರು :ಸೆಮಿಕಂಡಕ್ಟರ್ಗಳ ಉತ್ಪಾದನೆಗೆ ಸಂಬಂಧಿಸಿದಂತೆ ಸೆಮಿಕಾನ್ ಇಂಡಿಯಾ ಸಮ್ಮೇಳನ ನಡೆಯುತ್ತಿರುವುದು ನನಗೆ ಖುಷಿ ತಂದಿದೆ. ಎಲ್ಲಾ ಉದ್ಯಮಗಳನ್ನು ಸೆಮಿಕಂಡಕ್ಟರ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ. ಜಾಗತಿಕ ಮಟ್ಟದಲ್ಲಿ ಭಾರತವನ್ನು ಅರೆವಾಹಕಗಳನ್ನು ಉತ್ಪಾದಕ ಮತ್ತು ಪೂರೈಕೆದಾರ ರಾಷ್ಟ್ರವನ್ನಾಗಿ ಮಾಡುವುದು ನಮ್ಮ ಸಾಮೂಹಿಕ ಗುರಿಯಾಗಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಪ್ರಸ್ತುತ ಎಲ್ಲಾ ಕೈಗಾರಿಕೆಗಳಿಗೆ ಅತ್ಯಂತ ಮುಖ್ಯವಾಗಿ ಬೇಕಾದ ಸೆಮಿಕಂಡಕ್ಟರ್‌ಗಳು ಮತ್ತು ಮೈಕ್ರೊಪ್ರೊಸೆಸರ್‌ಗಳನ್ನು ಭಾರತದಲ್ಲಿ ಉತ್ಪಾದಿಸುವ ಸಲುವಾಗಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಗಳನ್ನು ಇಡುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೆಮಿಕಾನ್ ಇಂಡಿಯಾ-2022 ಸಮ್ಮೇಳನವನ್ನು ನಡೆಸಲಾಗುತ್ತಿದೆ.
ಈ ಸಮ್ಮೇಳನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಸೆಮಿಕಂಡಕ್ಟರ್ಗಳ ಮತ್ತು ಮೈಕ್ರೋಪ್ರೊಸೆಸರ್ಗಳ ಉತ್ಪಾದನೆ ಕುರಿತು ಮಾತನಾಡಿದ್ದಾರೆ. ಇದರ ಜೊತೆಗೆ ತಂತ್ರಜ್ಞಾನ ಕ್ರಾಂತಿ ಸಾಧಿಸಲು ನಾವು ಯತ್ನಿಸುತ್ತಿದ್ದೇವೆ. ಸುಮಾರು 6 ಲಕ್ಷ ಹಳ್ಳಿಗಳನ್ನು ಬ್ರಾಡ್‌ಬ್ಯಾಂಡ್‌ನೊಂದಿಗೆ ಸಂಪರ್ಕಿಸುವ ಹಾದಿಯಲ್ಲಿ ಮುನ್ನುಗ್ಗುತ್ತಿದ್ದೇವೆ.
ಹೊಸದಾಗಿ ವಿಶ್ವ ಕ್ರಮವು ರೂಪುಗೊಳ್ಳುತ್ತಿದೆ. ನಾವು ಈ ಅವಕಾಶವನ್ನು ಬಳಸಿಕೊಳ್ಳಬೇಕು. ನಮ್ಮಲ್ಲಿ ಸೆಮಿಕಂಡಕ್ಟರ್ ಉತ್ಪಾದನೆಗೆ ಬೇಕಾದ ಪರಿಸರ ವ್ಯವಸ್ಥೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇದನ್ನೂ ಓದಿ:ದೇಶವನ್ನು ಸೆಮಿಕಂಡಕ್ಟರ್ ಹಬ್ ಆಗಿಸುವ ಯತ್ನ: ಬೆಂಗಳೂರಿನಲ್ಲಿ ಸೆಮಿಕಾನ್ ಇಂಡಿಯಾ ಉದ್ಘಾಟಿಸಲಿರುವ ಪ್ರಧಾನಿ