ನವಹೆಹಲಿ: ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ಮೋದಿ ರಾಷ್ಟ್ರಪತಿ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ - ರಾಷ್ಟ್ರಪತಿ ದ್ರೌಪದಿ ಮುರ್ಮು
ಪ್ರಧಾನಿ ನರೇಂದ್ರ ಮೋದಿ ಅವರಿಂದು ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
![ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ PM Modi called on President Droupadi Murmu at Rashtrapati Bhavan](https://etvbharatimages.akamaized.net/etvbharat/prod-images/768-512-15926647-thumbnail-3x2-news.jpg)
ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಸೋಮವಾರ ಬೆಳಗ್ಗೆ 10.14ಕ್ಕೆ ಪ್ರಮಾಣವಚನ ಸ್ವೀಕರಿಸಿದ್ದರು. ಈ ಮೂಲಕ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.
ಇದನ್ನೂ ಓದಿ:ಭಾರತದ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು