ನವದೆಹಲಿ:ಉಕ್ರೇನ್ ಮೇಲೆ ಸಮರ ಸಾರಿರುವ ರಷ್ಯಾ ದಾಳಿ ಮುಂದುವರೆಸಿದೆ. ಈ ನಡುವೆ ಬೆಲಾರಸ್ನಲ್ಲಿ ಎರಡೂ ರಾಷ್ಟ್ರಗಳ ನಡುವೆ ಮಾತುಕತೆ ಮುಂದುವರೆದಿದೆ. ಉಕ್ರೇನ್ ಕದನ ವಿರಾಮ ಘೋಷಣೆ ಮಾಡುವಂತೆ ಪಟ್ಟು ಹಿಡಿದಿದೆ. ಆದರೆ ರಷ್ಯಾ ಇದಕ್ಕೆ ಇನ್ನೂ ಯಾವುದೇ ಆಶ್ವಾಸನೆ ಕೊಟ್ಟಿಲ್ಲ.
ಈ ನಡುವೆ ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಎಲ್ಲ ಕೆಲಸಗಳನ್ನ ಮುಂದುವರೆಸಿದೆ. ಆಪರೇಷನ್ ಗಂಗಾ' ಅಡಿಯಲ್ಲಿ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಪ್ರಗತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೊಂದು ಮಹತ್ವದ ಸಭೆ ನಡೆಸಿದರು.
ಕಳೆದ 24 ಗಂಟೆಗಳಲ್ಲಿ ಮೋದಿ ನಡೆಸುತ್ತಿರುವ ಮೂರನೇ ಸಭೆ ಇದಾಗಿದೆ. ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನೇ ಪ್ರಧಾನಿಗಳೇ ವಹಿಸಿದ್ದು, ಆರಪರೇಷನ್ ಗಂಗಾದ ಪರಿಶೀಲನೆ ನಡೆಸಿದರು. ಬುಡಾಪೆಸ್ಟ್ (ಹಂಗೇರಿ) ಮತ್ತು ಬುಕಾರೆಸ್ಟ್ (ರೊಮೇನಿಯಾ) ನಿಂದ ಆರು ವಿಮಾನಗಳ ಮೂಲಕ ಇದುವರೆಗೆ ಸುಮಾರು 1,400 ಭಾರತೀಯರನ್ನ ಭಾರತಕ್ಕೆ ಕರೆ ತರಲಾಗಿದೆ. ಈ ವಿಚಾರವನ್ನು ಪ್ರಧಾನಿ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.