ನವದೆಹಲಿ:ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಜೊತೆ ಪ್ರಧಾನಿ ಮಹತ್ವದ ಸಭೆ ನಡೆಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಏರ್ ಬೇಸ್ನಲ್ಲಿ ಡ್ರೋಣ್ ದಾಳಿ ಬೆನ್ನಲ್ಲೇ ನಡೆಯುತ್ತಿರುವ ಈ ಸಭೆ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ಎರಡು ದಿನಗಳ ಹಿಂದೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಡಾಖ್ಗೆ ಭೇಟಿ ನೀಡಿದ್ದರು. ಅವರು ದೆಹಲಿಗೆ ವಾಪಸ್ ಆಗುತ್ತಿದ್ದಂತೆ ಈ ಸಭೆ ನಡೆಯುತ್ತಿದ್ದು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸಭೆಯಲ್ಲಿ ಪಾಲ್ಗೊಂಡಿದ್ದು ಮಹತ್ವ ಪಡೆದುಕೊಂಡಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ಭಾರತದಲ್ಲಿನ ರಕ್ಷಣಾ ವಲಯ ಹಾಗೂ ಸೇನೆ ಮತ್ತಷ್ಟು ಬಲಿಷ್ಠಗೊಳಿಸುವ ಸಲುವಾಗಿ ಈ ಸಭೆ ನಡೆಯುತ್ತಿದೆ ಎನ್ನಲಾಗಿದೆ. ಆದರೆ ಜಮ್ಮು-ಕಾಶ್ಮೀರದ ವಿಮಾನ ನಿಲ್ದಾಣದಲ್ಲಿ ನಡೆದ ಸ್ಫೋಟದ ಬಗ್ಗೆ ಹಾಗೂ ಅದರ ಹಿಂದಿರುವ ಕೈವಾಡದ ಬಗ್ಗೆ ಈ ವೇಳೆ ಚರ್ಚೆ ನಡೆಯುವ ಸಾಧ್ಯತೆ ಹೆಚ್ಚಾಗಿದೆ. ಇದರ ತನಿಖೆ ನಡೆಸಲು ಈಗಾಗಲೇ ಎನ್ಐಎಗೆ ಸೂಚಿಸಲಾಗಿದೆ.