ಚಿಕ್ಕಬಳ್ಳಾಪುರ/ನವದೆಹಲಿ: ಚಿಕ್ಕಬಳ್ಳಾಪುರ ತಾಲೂಕಿನ ಹೀರೆನಾಗವೇಲಿ ಹತ್ತಿರದ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟಗೊಂಡು ಆರು ಜನ ಮೃತಪಟ್ಟಿದ್ದು, ಸಾವಿಗೆ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ದುರಂತದಿಂದ ನೋವಾಗಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತಾ, ದುಃಖಿತ ಕುಟುಂಬಗಳಿಗೆ ಸಾಂತ್ವನ ತಿಳಿಸುವೆ ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ.
ಜಿಲೆಟಿನ್ ಸ್ಫೋಟದಿಂದಾಗಿ ಚಿಕ್ಕಬಳ್ಳಾಪುರದ ಹೀರೆನಾಗವೇಲಿ ಗ್ರಾಮದ ಬಳಿ ಆರು ಮಂದಿ ಆಘಾತಕಾರಿ ವಿಚಾರವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಈ ಬಗ್ಗೆ ಚುರುಕಾಗಿ ತನಿಖೆ ನಡೆಸಿ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಕಲ್ಲು ಕ್ವಾರಿ ದುರಂತ: ಜಿಲೆಟಿನ್ ಸ್ಫೋಟದಿಂದ 6 ಜನ ದುರ್ಮರಣ
ಅವಘಡದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಮುರುಗೇಶ್ ನಿರಾಣಿ, ಶಿವಮೊಗ್ಗ ಸ್ಫೋಟದ ನಂತರ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ ಸಂಗತಿ. ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಸರ್ಕಾರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.