ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ: ಕಂಬನಿ ಮಿಡಿದ ಪ್ರಧಾನಿ - ಪ್ರಧಾನ ಮೋದಿ ಟ್ವೀಟ್ ಸುದ್ದಿ
13:21 January 15
ಧಾರವಾಡದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಸಾವನ್ನಪ್ಪಿದ್ದು, ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ.
ಧಾರವಾಡ:ಸಂಕ್ರಾತಿ ಹಬ್ಬದ ಪ್ರಯುಕ್ತ ಗೋವಾ ರಾಜ್ಯಕ್ಕೆ ಪ್ರವಾಸಕ್ಕೆ ತೆರಳಿದ್ದ ದಾವಣಗೆರೆ ಮೂಲದ 13 ಮಹಿಳೆಯರು ಧಾರವಾಡದ ಬಳಿ ಸಂಭವಿಸಿದ ಅಪಘಾತದಲ್ಲಿ ಸಾವನಪ್ಪಿದ್ದಾರೆ. ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ಆ ದೇವರ ಧೈರ್ಯ ತುಂಬಲಿ ಎಂದು ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ.
ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಸುದ್ದಿ ಆಘಾತ ನೀಡಿದೆ. ಈ ದುಃಖದ ಸಮಯ ಮತ್ತು ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರನ್ನು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಪ್ರಾರ್ಥಿಸುತ್ತೇನೆ ಅಂತಾ ಪಿಎಂ ನರೇಂದ್ರ ಮೋದಿ ಟ್ವೀಟ್ ಮೂಲಕ ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ಇಂದು ಬೆಳಗ್ಗೆ ಧಾರವಾಡದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವೈದ್ಯರು ಸೇರಿದಂತೆ 13 ಜನ ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಇದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.