ನವದೆಹಲಿ: ಇರಾನ್ನ ನೂತನ ಅಧ್ಯಕ್ಷ ಇಬ್ರಾಹಿಂ ರೈಸಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ‘ಭಾರತ ಮತ್ತು ಇರಾನ್ ನಡುವಿನ ಆತ್ಮೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಮತ್ತು ರೈಸಿಯೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ’ ಎಂದು ನಮೋ ಟ್ವೀಟ್ ಮಾಡಿದ್ದಾರೆ.
ಇರಾನ್ ಅಧ್ಯಕ್ಷ ಚುನಾವಣೆಯಲ್ಲಿ ರೈಸಿ ಸೇರಿದಂತೆ ನಾಲ್ವರು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಆದರೆ ಈ ಬಾರಿ ಕಡಿಮೆ ಮತದಾನವಾಗಿದ್ದು, ರೈಸಿ ಅವರ ಪರ 1.78 ಕೋಟಿ ಮತ ಚಲಾವಣೆಯಾಗಿತ್ತು. ಪ್ರತಿಸ್ಪರ್ಧಿ ಮೊಹಸೆನ್ ರೆಜಿ 33 ಲಕ್ಷ ಮತ ಪಡೆದಿದ್ದರು. ನ್ಯಾಯಾಂಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದ ರೈಸಿ, ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.