ನವದೆಹಲಿ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಹಾಗೂ ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
"ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಏಕನಾಥ್ ಶಿಂಧೆ ಅವರಿಗೆ ಅಭಿನಂದನೆಗಳು. ತಳಮಟ್ಟದ ನಾಯಕ, ಶ್ರೀಮಂತ ರಾಜಕೀಯ, ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವ ಹೊಂದಿರುವ ನೀವು ಮಹಾರಾಷ್ಟ್ರವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಕೆಲಸ ಮಾಡಿ, ಆ ವಿಶ್ವಾಸ ನನಗಿದೆ" ಎಂದಿದ್ದಾರೆ.
ಇದನ್ನೂ ಓದಿ:'ಮಹಾ' ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ, ಡಿಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪ್ರಮಾಣ
ಇದರ ಜೊತೆಗೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ದೇವೇಂದ್ರ ಫಡ್ನವೀಸ್ ಅವರನ್ನೂ ಪ್ರಧಾನಿ ಅಭಿನಂದಿಸಿದ್ದಾರೆ. "ಬಿಜೆಪಿ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದ್ದೀರಿ. ನಿಮ್ಮ ಅನುಭವ ಮತ್ತು ಪರಿಣತಿ ಸರ್ಕಾರದ ಆಸ್ತಿಯಾಗಲಿ. ಮಹಾರಾಷ್ಟ್ರದ ಬೆಳವಣಿಗೆ ಪಥ ಮತ್ತಷ್ಟು ಬಲಪಡಿಸುತ್ತೀರಿ ಎಂಬ ಖಾತ್ರಿ ನನಗಿದೆ" ಎಂದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನವೀಸ್ ಅವರನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.