ನವದೆಹಲಿ:ಜಪಾನ್‌ನ ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್ಗೆ ಹೊರಡಲಿರುವ ಭಾರತೀಯ ಅಥ್ಲೀಟ್ಗಳಿಗೆ ನಡೆಸಲಾಗಿರುವ ಸಿದ್ಧತೆಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪರಿಶೀಲನಾ ಸಭೆ ನಡೆಸಿದರು.
ಅಥ್ಲೀಟ್ಗಳಿಗೆ ಸೌಲಭ್ಯಗಳು, ವ್ಯಾಕ್ಸಿನೇಷನ್ ಸ್ಟೇಟಸ್ ಮುಂತಾದವುಗಳ ಬಗ್ಗೆ ಸಭೆ ನಡೆಸಲಾಗಿದ್ದು, ವಿವಿಧ ಹಂತಗಳಲ್ಲಿ ನೀಡುವ ಬೆಂಬಲದ ಬಗ್ಗೆ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಇದಲ್ಲದೇ ಜುಲೈ 13ರಂದು ಸಂಜೆ 5 ಗಂಟೆಗೆ ಟೋಕಿಯೋಗೆ ಹೊರಡುವ ಎಲ್ಲಾ ಅಥ್ಲೀಟ್ಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಸಭೆ ನಡೆಸಲಿದ್ದು, ದೇಶದ 130 ಕೋಟಿ ಜನತೆಯ ಪರವಾಗಿ ನಾನು ಅವರಿಗೆ ಶುಭಾಶಯ ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.