ಕರ್ನಾಟಕ

karnataka

ETV Bharat / bharat

ಮಹಿಳಾ ದಿನದ ಶುಭಕೋರಿದ ಪಿಎಂ: ವಿಶೇಷ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶ ಸಿಎಂ ಭಾಗಿ - ಮಹಿಳಾ ದಿನಾಚರಣೆ ಹಿನ್ನೆಲೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ
PM Narendra Modi

By

Published : Mar 8, 2021, 8:47 AM IST

ನವದೆಹಲಿ:ಪ್ರಧಾನಮಂತ್ರಿ ನರೇಂದ್ರ ಮೋದಿ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ದೇಶದ ಮಹಿಳೆಯರಿಗೆ ಶುಭಕೋರಿದ್ದಾರೆ. ಮಹಿಳಾ ಶಕ್ತಿಗೆ ಸಲ್ಯೂಟ್​ ಮಾಡುವೆ ಎಂದು ಟ್ವೀಟ್​ ಮಾಡಿದ್ದಾರೆ.

ನಮ್ಮ ರಾಷ್ಟ್ರದ ಮಹಿಳೆಯರ ಅನೇಕ ಸಾಧನೆಗಳನ್ನು ಮಾಡಿದ್ದು, ಭಾರತ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಮಹಿಳಾ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದು, ಎಲ್ಲಾ ವಿಭಾಗಗಳಲ್ಲಿ ಮಹಿಳೆಯರು ಹೆಚ್ಚು ಹೆಚ್ಚು ಅವಕಾಶಗಳನ್ನು ಪಡೆಯುತ್ತಿರುವುದು ನಮ್ಮ ಸರ್ಕಾರದ ಗೌರವ ಎಂದು ಪಿಎಂ ಹೇಳಿದ್ದಾರೆ.

ಓದಿ: ಮಹಿಳಾ ದಿನಾಚರಣೆ : ಗುಲಾಬಿ ಬಣ್ಣದಿಂದ ಕಂಗೊಳಿಸಿದ ಶಿವಾಜಿ ಟರ್ಮಿನಲ್​, ಚಾರ್ಬಾಗ್ ರೈಲ್ವೆ ನಿಲ್ದಾಣ

ಈ ಮಧ್ಯೆ ಭೋಪಾಲ್​ನಲ್ಲಿ ಮಹಿಳಾ ಭದ್ರತಾ ಪಡೆ ಮತ್ತು ಡ್ರೈವರ್​ಗಳಿಗಾಗಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಭಾಗಿಯಾಗಿದ್ದಾರೆ.

ABOUT THE AUTHOR

...view details