ನವದೆಹಲಿ:ದೇಶದಜನರಿಗೆ ಪ್ರಧಾನಿ ನರೇಂದ್ರ ದಾಮೋದರ್ ದಾಸ್ ಮೋದಿ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಹೊಸ ಸಂವತ್ಸರ ಎಲ್ಲರಿಗೂ ಸಂತೋಷ ಮತ್ತು ಉತ್ತಮ ಆರೋಗ್ಯ ನೀಡಲಿ ಎಂದು ಕೋರಿದ್ದಾರೆ.
2022ಕ್ಕೆ ಶುಭಾಶಯಗಳು! ಈ ವರ್ಷವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ. ನಾವು ಪ್ರಗತಿ ಮತ್ತು ಸಮೃದ್ಧಿಯ ಹೊಸ ಎತ್ತರಗಳನ್ನು ಏರೋಣ ಮತ್ತು ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ಇನ್ನಷ್ಟು ಶ್ರಮಿಸೋಣ ಎಂದು ಅವರು ಟ್ವೀಟ್ ಮಾಡಿದ್ದಾರೆ.