ನವದೆಹಲಿ: ರಕ್ಷಣಾ ಯೋಜನೆಗಳು ಮತ್ತು ನಾಗರಿಕ ಪರಮಾಣು ಶಕ್ತಿಯಲ್ಲಿ ಸಹಕಾರ ಸೇರಿದಂತೆ ವಿವಿಧ ದ್ವಿಪಕ್ಷೀಯ ಉಪಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಚರ್ಚೆ ನಡೆಸಿದ್ದಾರೆ. ಇದರ ಜೊತೆಗೆ ಜಾಗತಿಕ ಆಹಾರ ಭದ್ರತೆಗೆ ಸಂಬಂಧಿಸಿದಂತೆ ಪ್ರಮುಖ ಭೌಗೋಳಿಕ ರಾಜಕೀಯ ಸವಾಲುಗಳ ಕುರಿತು ಸಮಾಲೋಚಿಸಿರುವುದಾಗಿ ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
ಸದ್ಯ ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಉಂಟಾಗಬಹುದಾದ ಜಾಗತಿಕ ಆಹಾರ ಭದ್ರತೆ ಬಗ್ಗೆ ಭಾರತ ಮತ್ತು ಫ್ರಾನ್ಸ್ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ , ವಿನಾಶಕಾರಿಗಳನ್ನು ಎದುರಿಸಲು ಭಾರತ ಫ್ರಾನ್ಸ್‌ನೊಂದಿಗೆ ಸದಾ ಇರುತ್ತದೆ ಎಂದು ಹೇಳಿದ್ದಾರೆ.