ಚೆನ್ನೈ:ತಮಿಳುನಾಡಿನ ಚೆನ್ನೈನಲ್ಲಿ ಇಂದು ಅರ್ಜುನ್ ಮಾರ್ಕ್-1ಎ ಯುದ್ಧ ಟ್ಯಾಂಕ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭೂಸೇನಾ ಮುಖ್ಯಸ್ಥ ಎಂ.ಎಂ. ನರವಣೆಗೆ ಹಸ್ತಾಂತರಿಸಿದ್ದಾರೆ.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ ಯುದ್ಧ ಟ್ಯಾಂಕ್ ಇದಾಗಿದ್ದು, ಇಂದು ಭಾರತೀಯ ಸೇನೆಗೆ ಸೇರ್ಪಡೆಯಾಗಿದೆ. 8,500 ಕೋಟಿ ರೂ. ವೆಚ್ಚದಲ್ಲಿ ಒಟ್ಟು 118 ಅರ್ಜುನ್ ಟ್ಯಾಂಕ್ಗಳನ್ನು ನಿರ್ಮಿಸಿ ಕೊಡುವಂತೆ ಡಿಆರ್‌ಡಿಒಗೆ ಭಾರತೀಯ ಸೇನೆ ಹೇಳಿತ್ತು. ಶತ್ರು ಸೈನ್ಯವನ್ನು ಹೊಡೆದುರುಳಿಸುವ ಈ ಟ್ಯಾಂಕ್ ಅನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿರ್ಮಿಸಲಾಗಿದೆ.