ಢಾಕಾ (ಬಾಂಗ್ಲಾದೇಶ) :ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶೇಖ್ ಹಸೀನಾ ಅವರೊಂದಿಗೆ ಇಲ್ಲಿನ ರಾಷ್ಟ್ರೀಯ ಪರೇಡ್ ಮೈದಾನಕ್ಕೆ ಆಗಮಿಸಿದ್ದಾರೆ.
ಈ ಹಿಂದೆ ಪ್ರಧಾನಿ ಮೋದಿ ಮತ್ತು ಬಾಂಗ್ಲಾದೇಶ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೊಮೆನ್ ಬಾಂಗ್ಲಾದೇಶದ ರಾಜಧಾನಿಯಲ್ಲಿ ಮಾತುಕತೆ ನಡೆಸಿದ್ದರು. ಇನ್ನು ವಿದೇಶಾಂಗ ಸಚಿವಾಲಯದ ಪ್ರಕಾರ, ಪ್ರಧಾನಿ ಮೋದಿ ಅವರು ಬಾಂಗ್ಲಾದೇಶದ ಅಲ್ಪಸಂಖ್ಯಾತರ ಪ್ರತಿನಿಧಿಗಳು, ಮುಕ್ತಿಜೋಧರುಗಳು, ಭಾರತದ ಸ್ನೇಹಿತರು ಮತ್ತು ಯುವ ಪ್ರತಿಭೆಗಳು ಸೇರಿದಂತೆ ಹಲವಾರು ಸಮುದಾಯದ ಮುಖಂಡರನ್ನು ಭೇಟಿಯಾಗಿದ್ದಾರೆ.