ವಾಷಿಂಗ್ಟನ್ ಡಿಸಿ (ಯುಎಸ್ಎ): ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರನ್ನು ನಿನ್ನೆ ವಾಷಿಂಗ್ಟನ್ ಡಿಸಿಯಲ್ಲಿ ಭೇಟಿಯಾದರು. ಬಹು ನಿರೀಕ್ಷಿತ ಕ್ವಾಡ್ ನಾಯಕರ ಶೃಂಗಸಭೆಗೂ ಮುನ್ನ, ಸ್ಕಾಟ್ ಮಾರಿಸನ್ ಅವರೊಂದಿಗೆ ವಾಷಿಂಗ್ಟನ್ ಡಿಸಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು.
ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಪ್ರಧಾನಿ ಅವರಿಗೆ ಸಾಥ್ ನೀಡಿದರು. ಕ್ವಾಲ್ಕಾಮ್, ಅಡೋಬ್, ಬ್ಲ್ಯಾಕ್‌ಸ್ಟೋನ್, ಜನರಲ್ ಅಟೊಮಿಕ್ಸ್ ಮತ್ತು ಫಸ್ಟ್ ಸೋಲಾರ್ನ ಮುಖ್ಯಸ್ಥರನ್ನು ಕೂಡ ಇದೇ ವೇಳೆ ಪ್ರಧಾನಿ ಭೇಟಿಯಾದರು.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ ಸಭೆಯಲ್ಲಿ, ಪ್ರಧಾನ ಮಂತ್ರಿಗಳು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ಪ್ರಾಮುಖ್ಯತೆಯ ವಿಷಯಗಳನ್ನು ಚರ್ಚೆ ನಡೆಸಿದರು.
ಕ್ವಾಡ್ ನಾಯಕರ ಸಭೆಯಲ್ಲಿ ಭಾಗವಹಿಸಲು ಮತ್ತು ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುವ ಸಲುವಾಗಿ ಪಿಎಂ ಮೋದಿ ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ.
ಅಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಭೇಟಿಯಾದ ಪ್ರಧಾನಿ ಮೋದಿ
ಇಂದು ಬೈಡನ್ ಭೇಟಿ ಮಾಡಲಿರುವ ಮೋದಿ
ಅಮೆರಿಕದ ಪ್ರವಾಸದಲ್ಲಿರುವ ಪ್ರಧಾನಿ ಇಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಜತೆಗೆ ಮಾತುಕತೆ ನಡೆಸಲಿದ್ದಾರೆ. ಟ್ರಂಪ್ ಅಧಿಕಾರ ಕಳೆದುಕೊಂಡು ಬೈಡನ್ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಅಮೆರಿಕಕ್ಕೆ ಭೇಟಿ ನೀಡುತ್ತಿದ್ದಾರೆ.
ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಭೇಟಿಯಾದ ಪ್ರಧಾನಿ ಮೋದಿ
ಅಷ್ಟೇ ಅಲ್ಲ ಬೈಡನ್ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಅವರನ್ನ ನೇರವಾಗಿ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಬದಲಾದ ಪರಿಸ್ಥಿತಿಯಲ್ಲಿ ಹಾಗೂ ಜಾಗತಿಕ ವಿದ್ಯಾಮಾನ ಮತ್ತು ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ಭಾರಿ ಮಹತ್ವ ಪಡೆದುಕೊಂಡಿದೆ.