ವಾರಣಾಸಿ(ಉತ್ತರ ಪ್ರದೇಶ):ಉತ್ತರ ಪ್ರದೇಶದಲ್ಲಿ ಕೊನೆಯ ಹಂತದ ಮತದಾನ ಪ್ರಕ್ರಿಯೆ ಮಾರ್ಚ್ 7ರಂದು ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಸಂಸದೀಯ ಕ್ಷೇತ್ರ ವಾರಣಾಸಿಯಲ್ಲಿ ಭರ್ಜರಿ ಮತಬೇಟೆ ನಡೆಸಿದರು.
ವಾರಣಾಸಿಯ ಖಜೂರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ನಮೋ, ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಉತ್ತರ ಪ್ರದೇಶದಲ್ಲಿನ ಜನರು ಕುಟುಂಬ ರಾಜಕಾರಣವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಗೂಂಡಾಗಿರಿ, ಮಾಫಿಯಾ, ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮ ಉದ್ಯೋಗ ನೀಡುವ ಕುಟುಂಬವನ್ನ ಯುಪಿ ಜನರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರ ರಚನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಎರಡು ವರ್ಷಗಳಿಂದ ದೇಶದ 80 ಕೋಟಿ ಜನರಿಗೆ ಉಚಿತವಾಗಿ ಪಡಿತರ ವಿತರಣೆ ಮಾಡಲಾಗ್ತಿದೆ. ಇದರಿಂದ ಇಡೀ ವಿಶ್ವವೇ ಆಶ್ಚರ್ಯಕ್ಕೊಳಗಾಗಿದೆ. ಆದರೆ, ಬಡ ಜನರು, ದಲಿತರು, ಹಿಂದುಳಿದ ಕುಟುಂಬಗಳು ಸಂತೋಷವಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದರು.