ನವದೆಹಲಿ:ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಜನ್ಮದಿನದ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ನಿವಾಸದಲ್ಲಿ ದೇಶದ ವಿವಿಧೆಡೆಯಿಂದ ಬಂದಿದ್ದ ಯುವಕರೊಂದಿಗೆ "ನಿಮ್ಮ ನಾಯಕನ ಬಗ್ಗೆ ತಿಳಿಯಿರಿ" ಎಂಬ ವಿಷಯದ ಕುರಿತಾಗಿ ಸಂವಾದ ಕಾರ್ಯಕ್ರಮ ನಡೆಸಿದರು. ಇವರ ವಿಡಿಯೋವನ್ನು ಪ್ರಧಾನಿಗಳೇ ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಇದೇ ವೇಳೆ, ರಾಷ್ಟ್ರೀಯ ಮಕ್ಕಳ ಪ್ರಶಸ್ತಿಗೆ ಭಾಜನರಾದ 11 ಮಕ್ಕಳನ್ನೂ ಭೇಟಿ ಮಾಡಿದರು.
ಯುವಕರೊಂದಿಗೆ ನಡೆದ ಸಂವಾದದಲ್ಲಿ ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಜೀವನದ ವಿವಿಧ ಅಂಶಗಳನ್ನು ಮತ್ತು ಅವರಿಂದ ನಾವು ಕಲಿಯಬಹುದಾದ ವಿಷಯಗಳ ಬಗ್ಗೆ ವಿಸ್ತೃತವಾಗಿ ಪ್ರಧಾನಿಗಳು ಚರ್ಚಿಸಿದರು. ಸುಭಾಷ್ಚಂದ್ರ ಬೋಸ್ ಅವರು ತಮ್ಮ ಜೀವನದಲ್ಲಿ ಯಾವ ರೀತಿಯ ಸವಾಲುಗಳನ್ನು ಎದುರಿಸಿದರು ಹೇಗೆ ಎದುರಿಸಿದರು ಎಂಬುದನ್ನು ಐತಿಹಾಸಿಕ ವ್ಯಕ್ತಿಗಳ ಜೀವನ ಚರಿತ್ರೆಯನ್ನು ಓದಲು ಪ್ರಯತ್ನಿಸಬೇಕು ಎಂದು ಅವರು ಇದೇ ವೇಳೆ ಸಲಹೆ ನೀಡಿದರು.
ಓದಿ:ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿವಿಐಪಿ ಕೊಠಡಿಗೆ ಪ್ರವೇಶಿಸಲು ಯತ್ನಿಸಿದ್ದ ಯುವಕನ ಬಂಧನ
ಸಂವಾದದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದಕ್ಕೆ ಸಂತಸ: ಇನ್ನು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಸಂವಾದ ನಡೆಸಲು. ಸೆಂಟ್ರಲ್ ಹಾಲ್‌ನಲ್ಲಿ ಕುಳಿತುಕೊಳ್ಳಲು ಅವಕಾಶ ಸಿಕ್ಕಿದ್ದಕ್ಕೆ ಯುವಕ, ಯುವತಿಯರು ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮೂಲೆ ಮೂಲೆಗಳಿಂದ ಯುವಕರನ್ನು ಆಯ್ಕೆ ಮಾಡಲಾಗಿತ್ತು. ಹೀಗಾಗಿ ಇದು ವಿವಿಧತೆಯಲ್ಲಿ ಏಕತೆಯನ್ನು ಸಾರುವ ಕಾರ್ಯಕ್ರಮ ಎಂದು ಪ್ರಧಾನಿಗಳು ಬಣ್ಣಿಸಿದ್ದಾರೆ.