ಶಹಜಹಾನ್‌ಪುರ (ಉತ್ತರಪ್ರದೇಶ):ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಪ್ರದೇಶದ ಶಹಜಹಾನ್‌ಪುರದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. 36,200 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾಗಲಿದೆ.
ಶಂಕುಸ್ಥಾಪನೆ ಬಳಿಕ ಮಾತನಾಡಿದ ಅವರು, ತಾಯಿ ಗಂಗೆ ಎಲ್ಲಾ ಐಶ್ವರ್ಯ ಮತ್ತು ಸಮೃದ್ಧಿಯ ಮೂಲವಾಗಿದ್ದಾಳೆ. ಎಲ್ಲರಿಗೂ ಸಂತೋಷ ನೀಡಿ, ನೋವುಗಳನ್ನು ದೂರ ಮಾಡುತ್ತಾಳೆ. ಹಾಗೆಯೇ, ಗಂಗಾ ಎಕ್ಸ್‌ಪ್ರೆಸ್‌ವೇ ಉತ್ತರಪ್ರದೇಶದ ಸಮೃದ್ಧಿಗೆ ಹೊಸ ಬಾಗಿಲುಗಳನ್ನು ತೆರೆಯುತ್ತದೆ.
ಎಕ್ಸ್‌ಪ್ರೆಸ್‌ವೇಗಳು, ವಿಮಾನ ನಿಲ್ದಾಣಗಳು ಮತ್ತು ರೈಲುಮಾರ್ಗಗಳು ರಾಜ್ಯದ ಜನತೆಗೆ ವರದಾನವಾಗಲಿವೆ. ಮುಂದಿನ ಪೀಳಿಗೆಗೆ ಬೇಕಾದ ಎಲ್ಲಾ ಮೂಲಸೌಕರ್ಯಗಳೊಂದಿಗೆ ಶೀಘ್ರದಲ್ಲೇ ಉತ್ತರಪ್ರದೇಶ 'ಆಧುನಿಕ ರಾಜ್ಯ' ಎಂದು ಕರೆಯಲ್ಪಡುತ್ತದೆ ಎಂದರು.
ಉತ್ತರಪ್ರದೇಶದಲ್ಲಿ ಐದು ವರ್ಷಗಳ ಹಿಂದಿನ ಸ್ಥಿತಿಯನ್ನು ನೆನಪಿಸಿಕೊಳ್ಳಿ. ರಾಜ್ಯದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ಇತರ ನಗರಗಳು ಮತ್ತು ಹಳ್ಳಿಗಳಲ್ಲಿ ವಿದ್ಯುತ್ ಲಭ್ಯವಿರಲ್ಲ. ಸಾರ್ವಜನಿಕ ಹಣವನ್ನು ಹೇಗೆ ಬಳಸಲಾಗಿದೆ ಎಂಬುದನ್ನು ಜನರು ಚೆನ್ನಾಗಿ ನೋಡಿದ್ದಾರೆ. ಆದರೆ,