ಪಶ್ಚಿಮ ಬಂಗಾಳ: ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿರುವ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ಅವರಿಬ್ಬರೂ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ ಎಂದು ಹೇಳಿದರು.
ಪಶ್ಚಿಮ ಬಂಗಾಳದ ಅಸನ್ಸೋಲ್‌ನಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ಅವರು ಮಾತನಾಡಿದರು.
ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ, ಕಳೆದ 10 ವರ್ಷಗಳಲ್ಲಿ ಮುಸ್ಲಿಮರಿಗಾಗಿ ಅವರು ಮಾಡಿದ ಕೆಲಸಗಳನ್ನು ಪಟ್ಟಿ ಮಾಡಲಿ. ಮಮತಾ ಮತ್ತು ಪಿಎಂ ಮೋದಿ ಸಹೋದರ ಮತ್ತು ಸಹೋದರಿಯಿದ್ದಂತೆ. ಅವರು ತಮ್ಮ ಹೇಳಿಕೆಗಳ ಮೂಲಕವೇ ಜನರನ್ನು ಮರುಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.