ನವ ದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್'ನ 104ನೇ ಸಂಚಿಕೆಯನ್ನು ಉದ್ದೇಶಿಸಿ ಇಂದು ಮಾತನಾಡಲಿದ್ದಾರೆ. ಕಾರ್ಯಕ್ರಮವು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ.
ಈ ಕುರಿತ ಮಾಹಿತಿಯನ್ನು ಸಾಮಾಜಿಕ ಜಾಲತಾಣ ಮಾಧ್ಯಮ ಎಕ್ಸ್‌ನಲ್ಲಿ (ಹಿಂದಿನ ಟ್ವಿಟರ್) ಪೋಸ್ಟ್ ಮಾಡಿರುವ ಪ್ರಧಾನಿ, "ಭಾನುವಾರ ಬೆಳಗ್ಗೆ 11 ಗಂಟೆಗೆ 'ಮನ್ ಕಿ ಬಾತ್' ಕೇಳಿ. ಭಾರತದಾದ್ಯಂತ ಸ್ಪೂರ್ತಿದಾಯಕ ಜೀವನ ಪ್ರಯಾಣಗಳ ಬಗ್ಗೆ ಮಾತನಾಡಲು ನನಗೆ ಯಾವಾಗಲೂ ಸಂತೋಷವಾಗುತ್ತದೆ" ಎಂದು ಹೇಳಿದ್ದಾರೆ.
ಕಾರ್ಯಕ್ರಮವನ್ನು ಆಕಾಶವಾಣಿ ಮತ್ತು ದೂರದರ್ಶನದ ಸಂಪೂರ್ಣ ನೆಟ್‌ವರ್ಕ್, ಆಕಾಶವಾಣಿ ವೆಬ್‌ಸೈಟ್ ಮತ್ತು ನ್ಯೂಸನ್ ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ. ಇದನ್ನು ಆಕಾಶವಾಣಿ, ಡಿಡಿ ನ್ಯೂಸ್, ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಆಕಾಶವಾಣಿ ಹಿಂದಿ ಪ್ರಸಾರವಾದ ತಕ್ಷಣ ಪ್ರಾದೇಶಿಕ ಭಾಷೆಗಳಲ್ಲಿಯೂ ಕಾರ್ಯಕ್ರಮ ಪ್ರಸಾರವಾಗುತ್ತದೆ.
ಮಾಧ್ಯಮ ವರದಿಗಳ ಪ್ರಕಾರ, ಜಾರ್ಖಂಡ್‌ನ ಲೋಹರ್ಡಗಾದ ಮಸಿಯತು ಗ್ರಾಮದ ಬಗ್ಗೆಯೂ ಇಂದಿನ ಕಾರ್ಯಕ್ರಮದಲ್ಲಿ ಮೋದಿ ಮಾತನಾಡಲಿದ್ದಾರೆ. ಸ್ವಾವಲಂಬಿ ಭಾರತದ ಬಗ್ಗೆ ಜನರಿಗೆ ಅರಿವು ಮೂಡಿಸಲು ಈ ಗ್ರಾಮವನ್ನು ಪ್ರಧಾನಿ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ. ಬಿದಿರಿನಿಂದ ವಿವಿಧ ರೀತಿಯ ಉತ್ಪನ್ನಗಳನ್ನು ತಯಾರಿಸುವುದು ಈ ಗ್ರಾಮದ ಜನರ ವಿಶೇಷತೆ. ಇತ್ತೀಚಿನ ಅಧ್ಯಯನದ ಪ್ರಕಾರ, ಸುಮಾರು 23 ಕೋಟಿ ಜನರು ಮನ್ ಕಿ ಬಾತ್ ಕಾರ್ಯಕ್ರಮವನ್ನು ನಿಯಮಿತವಾಗಿ ಕೇಳುತ್ತಿದ್ದಾರೆ.