ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದ ಭದ್ರತಾ ಸನ್ನದ್ಧತೆ ಮತ್ತು ಜಾಗತಿಕ ಪರಿಸ್ಥಿತಿ ಕುರಿತು ಚರ್ಚಿಸಲು ಭಾನುವಾರ ಸಂಪುಟ ಸಮಿತಿ ಸಭೆ ನಡೆಸಿದ್ದು, ಮೂರು ಸೇನಾ ಮುಖ್ಯಸ್ಥರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.
ರಷ್ಯಾ ಮತ್ತು ಉಕ್ರೇನ್ ಉದ್ಧದ ನಡುವೆ ದೇಶದ ಭದ್ರತಾ ಸನ್ನಿವೇಶ ಮತ್ತು ಜಾಗತಿಕ ಪರಿಸ್ಥಿತಿ ಕುರಿತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್ ಚೌಧರಿ ಸೇರಿದಂತೆ ಇತರ ಹಿರಿಯ ರಾಷ್ಟ್ರೀಯ ಭದ್ರತಾ ಅಧಿಕಾರಿಗಳು ಪ್ರಧಾನ ಮಂತ್ರಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಇದಕ್ಕೂ ಮುನ್ನ ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎನ್‌ಎಸ್‌ಎ ಅಜಿತ್ ದೋವಲ್ ಭಾಗವಹಿಸಿದ್ದು, ಇದರ ಅಧ್ಯಕ್ಷತೆಯನ್ನು ಮೋದಿ ವಹಿಸಿದ್ದರು. ಸಭೆಯಲ್ಲಿ ಅವರು ಇತ್ತೀಚಿನ ಬೆಳವಣಿಗೆಗಳು ಮತ್ತು ಗಡಿ ಪ್ರದೇಶಗಳಲ್ಲಿ ಮತ್ತು ಸಮುದ್ರ ಮತ್ತು ವಾಯು ಡೊಮೇನ್‌ನಲ್ಲಿ ಭಾರತದ ಭದ್ರತಾ ಸನ್ನದ್ಧತೆಯ ವಿವಿಧ ಅಂಶಗಳನ್ನು ವಿವರಿಸಿದರು ಎಂದು ಪ್ರಧಾನಿ ಕಾರ್ಯಾಲಯವು ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ.