ಕೆವಾಡಿಯಾ( ಗುಜರಾತ್): ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 147ನೇ ಜನ್ಮದಿನದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕೆವಾಡಿಯಾದಲ್ಲಿ ಏಕತಾ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ, ರಾಷ್ಟ್ರೀಯ ಏಕತಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾವಿಧಿ ಬೋಧಿಸಿ ಮೆರವಣಿಗೆಯ ಗೌರವ ವಂದನೆ ಸ್ವೀಕರಿಸಿದರು. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಗೃಹ ಸಚಿವ ಅಮಿತ್ ಶಾ ಏಕತೆಯ ಓಟಕ್ಕೆ ಚಾಲನೆ ನೀಡಿದರು.
ವಲ್ಲಭಭಾಯಿ ಪಟೇಲ್ ಜನ್ಮದಿನ , ಏಕತಾ ಪ್ರತಿಮೆಗೆ ಮೋದಿ ಗೌರವಾರ್ಪಣೆ - PM Modi in Gujarat
ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ ನಿಮಿತ್ತ ದೇಶಾದ್ಯಂತ ಏಕತಾ ದಿವಸ್ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಗುಜರಾತ್ ದಲ್ಲಿ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಇಬ್ಬರು ವಿಭಿನ್ನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಅಕ್ಟೋಬರ್ 31 ರ ಜನ್ಮದಿನವನ್ನು ದೇಶಾದ್ಯಂತ ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಕಾರ್ಯಕ್ರಮದಡಿ ಪ್ರಧಾನಿ ಮೋದಿ ಗುಜರಾತ್‌ನಲ್ಲಿದ್ದರೆ, ದೇಶದ ಗೃಹ ಸಚಿವ ಅಮಿತ್ ಶಾ ದೆಹಲಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಧಾನಿ ಮೋದಿ ಎರಡು ದಿನಗಳ ಗುಜರಾತ್ ಭೇಟಿಯಲ್ಲಿದ್ದು, ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ಗುಜರಾತ್ ದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಪಿಎಂ ಮೋದಿ ವಡೋದರಾ ಭೇಟಿ :ವಡೋದರದಲ್ಲಿ ನಡೆದ ಭಾರತೀಯ ವಾಯುಪಡೆಯ ಸಾರಿಗೆ ವಿಮಾನ ತಯಾರಿಕಾ ಘಟಕದ ಶಂಕುಸ್ಥಾಪನೆ ಪ್ರಧಾನಿ ಮೋದಿಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬನಸ್ಕಾಂತ ಜಿಲ್ಲೆಯ ಬುಡಕಟ್ಟು ಸಮುದಾಯದ ಮಕ್ಕಳ ಸಂಗೀತ ತಂಡವು ಪ್ರಧಾನ ಮಂತ್ರಿಯವರ ಮುಂದೆ ಪ್ರದರ್ಶನಗೊಳ್ಳಲಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.