ಕರ್ನಾಟಕ

karnataka

ETV Bharat / bharat

ಪಾಲ್ಘರ್ ದುರಂತ: ಮೃತರ ಕುಟುಂಬಕ್ಕೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ

ಪಾಲ್ಘರ್ ಜಿಲ್ಲೆಯ ವಿರಾರ್​ನ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 33 ಕೋವಿಡ್​ ರೋಗಿಗಳು ಮೃತಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಸಂತಾಪ ಸೂಚಿಸಿದ್ದಾರೆ.

PM Modi, President Kovind condoles loss of lives in Maharashtra's Palghar hospital fire
ಪಾಲ್ಘರ್ ದುರಂತಕ್ಕೆ ಪ್ರಧಾನಿ, ರಾಷ್ಟ್ರಪತಿ ಸಂತಾಪ

By

Published : Apr 23, 2021, 12:28 PM IST

ಪಾಲ್ಘರ್ (ಮಹಾರಾಷ್ಟ್ರ): ಬೆಂಕಿ ಅನಾಹುತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಮಹಾರಾಷ್ಟ್ರ ಸರ್ಕಾರ ಘೋಷಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಇದೊಂದು ದೊಡ್ಡ ಆಘಾತ. ಇದರ ಹೊಣೆಗಾರರನ್ನು ಸುಮ್ಮನೆ ಬಿಡಲಾಗುವುದಿಲ್ಲ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸರ್ಕಾರ ತಲಾ 5 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಿದೆ ಎಂದು ಮಹಾರಾಷ್ಟ್ರ ಸಚಿವ ಏಕನಾಥ ಶಿಂಧೆ ಹೇಳಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿರುವ ಪಿಎಂ ಮೋದಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಾಂತ್ವನಗಳು. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಟ್ವೀಟ್​ ಮಾಡಿದ್ದಾರೆ.

ಪ್ರಧಾನ ಮಂತ್ರಿ ಕಚೇರಿಯ ಟ್ವೀಟ್​

ಇದನ್ನೂ ಓದಿ: ಆಸ್ಪತ್ರೆ ಅಗ್ನಿ ದುರಂತದಲ್ಲಿ 13 ಮಂದಿ ಬಲಿ: ಇದೇನು ರಾಷ್ಟ್ರಮಟ್ಟದ ಸುದ್ದಿಯಲ್ಲ ಎಂದ 'ಮಹಾ' ಆರೋಗ್ಯ ಸಚಿವ!

ಮುಂಬೈನ ವಿರಾರ್‌ನ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ದುರಂತದಿಂದ ರೋಗಿಗಳು ಸಾವನ್ನಪ್ಪಿದ ಸುದ್ದಿ ತೀವ್ರ ದುಃಖ ತಂದಿದೆ. ಈ ಹೃದಯ ವಿದ್ರಾವಕ ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ಸಾಂತ್ವನಗಳನ್ನು ತಿಳಿಸುವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದಾರೆ.

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್​ನ ವಿಜಯ್ ವಲ್ಲಭ್ ಆಸ್ಪತ್ರೆಯ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಬೆಂಕಿ ಕಾಣಿಸಿಕೊಂಡು 13 ಕೋವಿಡ್​ ರೋಗಿಗಳು ಮೃತಪಟ್ಟಿದ್ದಾರೆ.

ABOUT THE AUTHOR

...view details