ಕರ್ನಾಟಕ

karnataka

By

Published : Jan 7, 2022, 5:20 AM IST

ETV Bharat / bharat

ಪ್ರಧಾನಿ ಮೋದಿಗೆ ಭದ್ರತಾ ಲೋಪ : ಇಂದು ಸುಪ್ರೀಂ​ ಕೋರ್ಟ್​ನಲ್ಲಿ ತನಿಖೆಗಾಗಿ ಸಲ್ಲಿಸಿರುವ ಅರ್ಜಿ ವಿಚಾರಣೆ

ಹಿರಿಯ ವಕೀಲ ಮಣೀಂದರ್​ ಸಿಂಗ್ ಅವರು ಲಾಯರ್​ ವಾಯ್ಸ್​ ಸಂಸ್ಥೆಯ ಪರ ಈ ಅರ್ಜಿ ಸಲ್ಲಿಸಿದ್ದು, ಭದ್ರತಾ ಲೋಪಕ್ಕೆ ಕಾರಣರಾದವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಮತ್ತು ಭವಿಷ್ಯದಲ್ಲಿ ದೇಶದ ಪ್ರಧಾನ ಮಂತ್ರಿಗೆ ಇಂತಹ ಭದ್ರತಾ ಲೋಪ ಸಂಭವಿಸದಂತೆ ಪಂಜಾಬ್​ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

PM Modi security breach
ಪ್ರಧಾನಿ ಮೋದಿಗೆ ಭದ್ರತಾ ಲೋಪ

ನವದೆಹಲಿ: ಎರಡು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾದ ಭದ್ರತಾ ಲೋಪದ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಲಾಯರ್​ ವಾಯ್ಸ್​ ಸಂಸ್ಥೆ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ ನೀಡಿದ್ದು, ಶುಕ್ರವಾರ ವಿಚಾರಣೆ ನಡೆಯಲಿದೆ.

ಹಿರಿಯ ವಕೀಲ ಮಣೀಂದರ್​ ಸಿಂಗ್ ಅವರು ಲಾಯರ್​ ವಾಯ್ಸ್​ ಸಂಸ್ಥೆಯ ಪರ ಈ ಅರ್ಜಿ ಸಲ್ಲಿಸಿದ್ದು, ಭದ್ರತಾ ಲೋಪಕ್ಕೆ ಕಾರಣರಾದವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಮತ್ತು ಭವಿಷ್ಯದಲ್ಲಿ ದೇಶದ ಪ್ರಧಾನ ಮಂತ್ರಿಗೆ ಇಂತಹ ಭದ್ರತಾ ಲೋಪ ಸಂಭವಿಸದಂತೆ ಪಂಜಾಬ್​ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಈ ರೀತಿಯ ಭದ್ರತಾ ಉಲ್ಲಂಘನೆಯನ್ನು ಮತ್ತೊಮ್ಮೆ ಸಂಭವಿಸಲು ಅನುಮತಿಸಲಾಗುವುದಿಲ್ಲ ಮತ್ತು ಈ ವಿಷಯದ ಬಗ್ಗೆ ಸಂಪೂರ್ಣ ತನಿಖೆಯ ಅಗತ್ಯವಿದೆ ಎಂದು ಮಣೀಂದರ್ ಸಿಂಗ್ ವಾದಿಸಿದ್ದಾರೆ. ಪಂಜಾಬ್‌ ಪೊಲೀಸರು ಪಂಜಾಬ್‌ ಭೇಟಿಗಾಗಿ ಮಾಡಿದ್ದ ಭದ್ರತಾ ವ್ಯವಸ್ಥೆಯ ಎಲ್ಲ ಸಾಕ್ಷ್ಯಗಳನ್ನು ಸುಪರ್ದಿಗೆ ತೆಗೆದುಕೊಳ್ಳುವಂತೆ ಭಟಿಂಡಾ ಜಿಲ್ಲಾ ನ್ಯಾಯಾಧೀಶರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿಯ ಪ್ರತಿಯನ್ನು ಪಂಜಾಬ್​ ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡಿ. ಶುಕ್ರವಾರ ಈ ಅರ್ಜಿಯನ್ನು ಮೊದಲನೆಯದಾಗಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠವು ಹೇಳಿತ್ತು.

ಬುಧವಾರ ಪಂಜಾಬ್​ನ ಫಿರೋಜ್‌ಪುರದಲ್ಲಿ ಆಯೋಜನೆಗೊಂಡಿದ್ದ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಕೆಲ ಪ್ರತಿಭಟನಾಕಾರರು ರಸ್ತೆಯನ್ನು ಅಡ್ಡಗಟ್ಟಿದ್ದರು. ಈ ವೇಳೆ ಮೋದಿ ತಮ್ಮ ಬೆಂಗಾವಲು ಪಡೆಯೊಂದಿಗೆ ಫ್ಲೈಓವರ್​ನಲ್ಲೇ ಸುಮಾರು 20 ನಿಮಿಷಗಳ ಕಾಲ ಕಳೆಯಬೇಕಾಯಿತು. ಬಳಿಕ ರ್‍ಯಾಲಿಯಲ್ಲಿ ಭಾಗಿಯಾಗದೇ ಪ್ರಧಾನಿ ದೆಹಲಿಗೆ ವಾಪಸ್​ ಆಗಿದ್ದರು.

ABOUT THE AUTHOR

...view details