ನವದೆಹಲಿ: ಹಿರಿಯ ಬಿಜೆಪಿ ಮುಖಂಡ ಎಲ್. ಕೆ ಅಡ್ವಾಣಿ ಅವರು ಇಂದು 94 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪಕ್ಷದ ಹಿರಿಯ ನಾಯಕನ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಶುಭಾಶಯ ಕೋರಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, ‘ ಎಲ್.ಕೆ ಅಡ್ವಾಣಿ ಅವರಿಗೆ ಅವರಿಗೆ ಜನ್ಮದಿನದ ಶುಭಾಶಯಗಳು, ದೇವರು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ನೀಡಲೆಂದು ಪ್ರಾರ್ಥಿಸುತ್ತೇನೆ. ದೇಶದ ಜನರನ್ನು ಸಬಲೀಕರಣಗೊಳಿಸುವ ಮತ್ತು ನಮ್ಮ ಸಾಂಸ್ಕೃತಿಕ ಹೆಮ್ಮೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅವರು ಪ್ರಯತ್ನಿಸಿದ್ದಾರೆ. ಅವರ ಪಾಂಡಿತ್ಯಪೂರ್ಣ ಅನ್ವೇಷಣೆಗಳು ಮತ್ತು ಬುದ್ಧಿಶಕ್ತಿಗಾಗಿ ಜನರಿಂದ ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ.