ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಅಮೆರಿಕ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಕಮಲಾ ಹ್ಯಾರಿಸ್ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ತಿಳಿಸಿದ್ದಾರೆ.
'ಅದ್ಭುತ ಗೆಲುವು ಸಾಧಿಸಿರುವ ಜೋ ಬೈಡನ್ಗೆ ಅಭಿನಂದನೆ! ಈ ಮೊದಲು ಉಪಾಧ್ಯಕ್ಷರಾಗಿ, ಭಾರತ-ಅಮೆರಿಕ ಸಂಬಂಧ ಬಲಿಷ್ಠಗೊಳಿಸಲು ನೀವು ನೀಡಿದ ಕೊಡುಗೆ ಅಮೂಲ್ಯವಾದದ್ದು. ಉಭಯ ದೇಶಗಳ ಸಂಬಂಧ ಇನ್ನಷ್ಟು ಎತ್ತರಕ್ಕೆ ಒಯ್ಯಲು ನಿಮ್ಮ ಜೊತೆ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ' ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕಮಲಾ ಹ್ಯಾರಿಸ್ಗೆ ಅಭಿನಂದನೆ ಸಲ್ಲಿಸಿರುವ ಮೋದಿ, ನಿಮ್ಮ ಯಶಸ್ಸು ಹೊಸ ಹಾದಿಯಾಗಿದೆ ಜೊತೆಗೆ ಎಲ್ಲ ಭಾರತೀಯ ಅಮೆರಿಕನ್ರ ಅಪಾರ ಹೆಮ್ಮೆಯ ವಿಷಯವಾಗಿದೆ. ನಿಮ್ಮ ಬೆಂಬಲ ಮತ್ತು ನಾಯಕತ್ವದಲ್ಲಿ ಇಂಡಿಯಾ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿಗೊಳ್ಳಿದೆ ಎಂಬ ಆತ್ಮವಿಶ್ವಾವಿದೆ ಎಂದು ಟ್ವೀಟ್ ಮಾಡಿದ್ದಾರೆ.