ಕೋಲ್ಕತ್ತಾ(ಪಶ್ಚಿಮ ಬಂಗಾಳ):ಗುವಾಹಟಿ-ಬಿಕನೇರ್ ನಡುವಿನ ಎಕ್ಸ್‌ಪ್ರೆಸ್ ರೈಲು ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ದೊಮೊಹಾನಿ ಬಳಿ ಹಳಿ ತಪ್ಪಿದ್ದು, ಘಟನೆಯಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. 42ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿವೆ. ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ದೂರವಾಣಿ ಕರೆ ಮಾಡಿ, ಮಾಹಿತಿ ಪಡೆದುಕೊಂಡಿದ್ದು ರಕ್ಷಣಾ ಕಾರ್ಯಾಚರಣೆ ಬಗ್ಗೆ ನಿಗಾ ವಹಿಸುವಂತೆ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಘಟನಾ ಸ್ಥಳಕ್ಕೆ ಖುದ್ದಾಗಿ ರೈಲ್ವೆ ಸಚಿವರು ಭೇಟಿ ನೀಡುವುದಾಗಿ ಈಗಾಗಲೇ ತಿಳಿಸಿದ್ದು, ಅಪಘಾತದ ಬಗ್ಗೆ ತನಿಖೆ ನಡೆಸಲು ಸೂಚನೆ ನೀಡಿರುವುದಾಗಿ ಮಾಹಿತಿ ನೀಡಿದ್ದಾರೆ.