ನವದೆಹಲಿ:ಅಬುಧಾಬಿ ಯುವರಾಜ ಹಾಗೂ ಯುಎಇ ಸಶಸ್ತ್ರ ಪಡೆಗಳ ಡೆಪ್ಯೂಟಿ ಸುಪ್ರೀಂ ಕಮಾಂಡರ್ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಕೊರೊನಾ ಸಾಂಕ್ರಾಮಿಕದ ಕುರಿತು ಚರ್ಚೆ ನಡೆಸಿದ್ದಾರೆ.
ಆರೋಗ್ಯದ ಮಹಾ -ಬಿಕ್ಕಟ್ಟಿನ ನಡುವೆಯೂ ಭಾರತ ಮತ್ತು ಸಂಯುಕ್ತ ಅರಬ್ ಸಂಸ್ಥಾನದ (ಯುನೈಟೆಡ್ ಅರಬ್ ಎಮಿರೇಟ್ಸ್ - ಯುಎಇ) ನಡುವಿನ ಸಹಕಾರ ಸ್ಥಗಿತಗೊಂಡಿರಲಿಲ್ಲ ಎಂದು ಇಬ್ಬರು ನಾಯಕರೂ ಸಂತೋಷ ವ್ಯಕ್ತಪಡಿಸಿದ್ದಾರೆ. ವ್ಯಾಪಾರ ಹಾಗೂ ಹೂಡಿಕೆಯನ್ನು ಹೆಚ್ಚಿಸುವ ಕುರಿತು ಚರ್ಚಿಸಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.