ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಂಗಳವಾರ ದೂರವಾಣಿ ಸಂಭಾಷಣೆ ನಡೆಸಿದರು. ರಷ್ಯಾದೊಂದಿಗೆ ಯುದ್ಧವನ್ನು ನಿಲ್ಲಿಸಲು ಮಾತುಕತೆ ಹಾಗೂ ರಾಜತಾಂತ್ರಿಕತೆಯ ಹಾದಿಯನ್ನು ಅನುಸರಿಸುವ ಅಗತ್ಯವನ್ನು ಪ್ರಧಾನಿ ಪುನರುಚ್ಚರಿಸಿದರು.
ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಉಭಯ ನಾಯಕರು ಚರ್ಚಿಸಿದರು. ರಷ್ಯಾ ಹಾಗೂ ಉಕ್ರೇನ್ ನಡುವಿನ ಹಗೆತನವನ್ನು ಶೀಘ್ರವಾಗಿ ಅಂತ್ಯಗೊಳಿಸಲು ಕುರಿತ ಮತ್ತೊಮ್ಮೆ ಕೇಳಿದ ಪ್ರಧಾನಿ ಮೋದಿ, ಇದಕ್ಕಾಗಿ ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಯನ್ನು ಅನುಸರಿಸುವಂತೆ ಸಲಹೆ ನೀಡಿದರು.
ಸಂಘರ್ಷಕ್ಕೆ ಯಾವುದೇ ಮಿಲಿಟರಿ ಪರಿಹಾರವಾಗುವುದಿಲ್ಲ ಎಂದು ದೃಢ ವಿಶ್ವಾಸದಿಂದ ಹೇಳಿದ ಮೋದಿ, ಯಾವುದೇ ಶಾಂತಿ ಪ್ರಯತ್ನಕ್ಕೆ ಕೊಡುಗೆ ನೀಡಲು ಭಾರತವು ಸಿದ್ಧವಾಗಿದೆ ಎಂದು ತಿಳಿಸಿದರು. ಜೊತೆಗೆ ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಕಾನೂನು ಮತ್ತು ಎಲ್ಲ ರಾಷ್ಟ್ರಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆ ಗೌರವಿಸುವ ಪ್ರಾಮುಖ್ಯತೆಯನ್ನು ಅವರು ಒತ್ತಿ ಹೇಳಿದರು.
ಪರಮಾಣು ಅಪಾಯಕಾರಿಯಾಗಿದ್ದು, ಸಾರ್ವಜನಿಕ ಆರೋಗ್ಯ ಮತ್ತು ಪರಿಸರಕ್ಕೆ ಬಹು ವ್ಯಾಪಕ ಮತ್ತು ದುರಂತದ ಪರಿಣಾಮಗಳನ್ನು ಉಂಟುಮಾಡಬಹುದು ಎಂದೂ ಪ್ರಧಾನಿ ಮೋದಿ, ಉಕ್ರೇನ್ ಅಧ್ಯಕ್ಷರೊಂದಿಗೆ ಮಾತುಕತೆಯಲ್ಲಿ ತಿಳಿಸಿದರು ಅಂತಾ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.
ಇದನ್ನೂ ಓದಿ:ಹಿಮಪಾತ ದುರಂತ: 7 ಪರ್ವತಾರೋಹಿಗಳ ದುರ್ಮರಣ, ಇನ್ನೂ 25 ಜನರು ನಾಪತ್ತೆ