ನವದೆಹಲಿ:ಇಟಲಿ ರಾಜಧಾನಿ ರೋಮ್ನಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಅಫ್ಘಾನಿಸ್ತಾನ ಭಯೋತ್ಪಾದಕರ ಮೂಲವಾಗುತ್ತಿದ್ದು, ಅದನ್ನೆಲ್ಲ ತಡೆಯಬೇಕಾದ ಅನಿವಾರ್ಯತೆ ಇದೆ ಎಂದು ಒತ್ತಿ ಹೇಳಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಶೃಂಗಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಫ್ಘಾನ್ ಅನ್ನು ತಾಲಿಬಾನ್ ವಶಕ್ಕೆ ಪಡೆದುಕೊಂಡ ಬಳಿಕ ಅಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಮೇಲೆ ಹೆಚ್ಚಿನ ಬೆಳಕು ಚೆಲ್ಲಿದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಕೂಡ ಮಾಡಿದ್ದಾರೆ.
ಜಿ-20 ಪ್ರಭಾವಿ ನಾಯಕರ ಶೃಂಗಸಭೆಯಲ್ಲಿ ವರ್ಚುಯಲ್ ಮೂಲಕ ಭಾಗಿಯಾಗಿದ್ದ ನಮೋ, ಅಫ್ಘಾನ್ ದೇಶದಲ್ಲಿ ಇದೀಗ ಬದಲಾವಣೆ ತರುವ ಅವಶ್ಯಕತೆ ಇದ್ದು, ಅಲ್ಲಿನ ನಾಗರಿಕರಿಗೆ ಮಾನವೀಯತೆ ದೃಷ್ಟಿಯಿಂದ ನೆರವು ನೀಡಬೇಕಾಗಿದೆ ಎಂದು ಒತ್ತಿ ಹೇಳಿದರು.