ನವದೆಹಲಿ: ಸಿಕ್ಕಿಂ-ನೇಪಾಳ ಗಡಿ ಬಳಿ ಸಂಭವಿಸಿದ ಭೂಕಂಪದಿಂದ ಉಂಟಾದ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಂಪನ ಪೀಡಿತ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕನ ಮಾಡಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಪಿಎಂ ಮೋದಿ ಈಗಾಗಲೇ ಬಿಹಾರ ಸಿಎಂ ನಿತೀಶ್ ಕುಮಾರ್, ಅಸ್ಸೋಂ ಸಿಎಂ ಸರ್ಬಾನಂದ ಸೋನೊವಾಲ್ ಮತ್ತು ಸಿಕ್ಕಿಂ ಸಿಎಂ ಪಿಎಸ್ ತಮಾಂಗ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಮೂಲಗಳು ಹೇಳಿವೆ.