ನವದೆಹಲಿ:ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಭಾರತೀಯ ವೈದ್ಯಕೀಯ ಸಂಘವು ಕಾರ್ಯಕ್ರಮವೊಂದನ್ನು ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.
ಈ ಕುರಿತು ಟ್ವಿಟರ್ನಲ್ಲಿ ಪ್ರಧಾನಿ ಮೋದಿ ಮಾಹಿತಿ ನೀಡಿದ್ದು, ಕೋವಿಡ್ ವಿರುದ್ಧ ಹೋರಾಡುತ್ತಿರುವ ಎಲ್ಲಾ ವೈದ್ಯರ ಪ್ರಯತ್ನಗಳ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ಜುಲೈ 1 ಅನ್ನು ರಾಷ್ಟ್ರೀಯ ವೈದ್ಯರ ದಿನವೆಂದು ಗುರುತಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಆಯೋಜಿಸಿದ ಕಾರ್ಯಕ್ರಮದಲ್ಲಿ ವೈದ್ಯರ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಜೆ.ಜಯಲಾಲ್ ಅವರು ಮಾತನಾಡಿ ವೈದ್ಯರನ್ನು ಗೌರವಿಸಲಾಗುವುದು, ರಕ್ಷಣೆ ಒದಗಿಸಲಾಗುವುದು ಎಂದು ಪ್ರಧಾನಿ ಭರವಸೆ ನೀಡಿದ್ದಾರೆ ಎಂದಿದ್ದರು.
ಇದನ್ನೂ ಓದಿ:Darbhanga Blast Case: ಹೈದರಾಬಾದ್ನಲ್ಲಿ ಇಬ್ಬರು ಭಯೋತ್ಪಾದಕ ಬ್ರದರ್ಸ್ ಅರೆಸ್ಟ್
ಇನ್ನು ದೇಶ ಕಂಡ ಪ್ರಖ್ಯಾತ ವೈದ್ಯ ಡಾ.ಬಿ.ಸಿ ರಾಯ್ ಅವರ ಸ್ಮರಣಾರ್ಥ ವೈದ್ಯರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರತಿವರ್ಷದಂತೆ, ವೈದ್ಯರ ಕೊಡುಗೆಗಳನ್ನು ಗೌರವಿಸಲು ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸುತ್ತಿದ್ದು. 1991ರಿಂದ ವೈದ್ಯರ ದಿನ ಆಚರಿಸಲಾಗುತ್ತಿದೆ.