ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅಡಿಯಲ್ಲಿ ಒಂದು ವರ್ಷದ ಸುಧಾರಣೆಗಳು ಪೂರ್ಣಗೊಂಡಿರುವುದನ್ನು ಗುರುತಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಗೂ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯ ಕ್ಷೇತ್ರದ ಸಿಬ್ಬಂದಿ ಜೊತೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಲಿದ್ದಾರೆ.
ಪ್ರಧಾನಿ ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ಮೋದಿ ಅನೇಕ ಉಪಕ್ರಮಗಳಿಗೆ ನಾಳೆ ಮೋದಿ ಚಾಲನೆ ನೀಡಲಿದ್ದಾರೆ ಎಂದು ಪಿಎಂ ಕಚೇರಿ ತಿಳಿಸಿದೆ. ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಅನೇಕ ಆಗಮನ ಮತ್ತು ನಿರ್ಗಮನದ ಆಯ್ಕೆಗಳನ್ನು ನೀಡಲಾಗುತ್ತದೆ ಮತ್ತು ಪ್ರಾದೇಶಿಕ ಭಾಷೆಗಳಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ಕಾರ್ಯಕ್ರಮಗಳು ಮತ್ತು ಉನ್ನತ ಶಿಕ್ಷಣದ ಅಂತಾರಾಷ್ಟ್ರೀಕರಣದ ಮಾರ್ಗಸೂಚಿಗಳನ್ನು ಈ ಯೋಜನೆ ಮೂಲಕ ಒದಗಿಸಲಾಗುತ್ತದೆ.