ಕರ್ನಾಟಕ

karnataka

ETV Bharat / bharat

ನೈಸರ್ಗಿಕ ಕೃಷಿ ಕುರಿತು ಇಂದು ರೈತರು, ವಿಜ್ಞಾನಿಗಳ ಜೊತೆ ಪ್ರಧಾನಿ ಮೋದಿ ಮಾತುಕತೆ - ಇಂದು ನೈಸರ್ಗಿಕ ಸಮ್ಮೇಳನದಲ್ಲಿ ಮೋದಿ ಭಾಗಿ

ಗುಜರಾತ್‌ನಲ್ಲಿ ನೈಸರ್ಗಿಕ ಕೃಷಿ ಕುರಿತು ನಡೆಯುತ್ತಿರುವ ಶೃಂಗಸಭೆ ಇಂದು ಮುಕ್ತಾಯಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರು ಮತ್ತು ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

PM Modi
ಮೋದಿ ಮಾತುಕತೆ

By

Published : Dec 16, 2021, 9:43 AM IST

ನವದೆಹಲಿ:ಗುಜರಾತ್‌ನಲ್ಲಿ ನೈಸರ್ಗಿಕ ಕೃಷಿ ಕುರಿತು ನಡೆಯುತ್ತಿರುವ ಶೃಂಗಸಭೆ ಇಂದು ಮುಕ್ತಾಯಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರು ಮತ್ತು ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಹೀಗಾಗಿ ಬಿಜೆಪಿ ಪ್ರತಿ ಮಂಡಲದಲ್ಲಿ ದೊಡ್ಡ ಪರದೆಗಳನ್ನು ಸಿದ್ಧ ಮಾಡಿದ್ದು, ಮೋದಿ ಅವರ ಭಾಷಣವನ್ನು ನೇರ ಪ್ರಸಾರ ಮಾಡಲಾಗುತ್ತಿದೆ. ಕಾರ್ಯಕ್ರಮ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಇದರಿಂದ ರೈತರ ಉತ್ಪಾದನಾ ವೆಚ್ಚಗಳ ಕಡಿತ ಮತ್ತು ಆದಾಯವು ಹೆಚ್ಚಾಗಲಿದೆ ಎಂದು ಸಿಂಗ್ ಹೇಳಿದರು.

ಇದನ್ನೂ ಓದಿ: Dominican Republic plane crash: ಖಾಸಗಿ ಜೆಟ್​ ಪತನವಾಗಿ 9 ಮಂದಿ ದುರ್ಮರಣ

ಕೃಷಿಯಲ್ಲಿ ನೈಸರ್ಗಿಕ ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಅದರಿಂದಾಗುವ ಪ್ರಯೋಜನಗಳ ಬಗ್ಗೆ ಮೋದಿ ವಿವರಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.

ABOUT THE AUTHOR

...view details