ನವದೆಹಲಿ:ಇಂದು 7ನೇ ಅಂತಾರಾಷ್ಟ್ರೀಯ ಯೋಗ ದಿನವಾಗಿದ್ದು, ಇದರ ಪ್ರಯುಕ್ತ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಬೆಳಗ್ಗೆ 6.30ಕ್ಕೆ ಮಾತನಾಡಲಿದ್ದಾರೆ. ಈ ಬಗ್ಗೆ ನಿನ್ನೆ ಟ್ವೀಟ್ ಮಾಡಿದ್ದ ಅವರು, ದೈಹಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಯೋಗವನ್ನು ಅಭ್ಯಾಸ ಮಾಡುವುದರ ಮೇಲೆ ಕೇಂದ್ರೀಕರಿಸುವ ‘ಯೋಗ ಫಾರ್ ವೆಲ್ನೆಸ್’ ಈ ವರ್ಷದ ವಿಷಯವಾಗಿದೆ ಎಂದು ಹೇಳಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನ: ಕೆಲವೇ ಕ್ಷಣಗಳಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಮಾತು - ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ
ಇಂದು ಅಂತಾರಾಷ್ಟ್ರೀಯ ಯೋಗ ದಿನವಾಗಿದ್ದು, ಇದರ ಪ್ರಯುಕ್ತ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರತಿವರ್ಷ ರಾಜಧಾನಿ ದೆಹಲಿಯಲ್ಲಿ ಒಂದಿಷ್ಟು ಜನರನ್ನು ಒಗ್ಗೂಡಿಸಿ ಯೋಗಾಭ್ಯಾಸ ಮಾಡಿ ಯೋಗ ದಿನವನ್ನು ಪಿಎಂ ಮೋದಿ ಆಚರಿಸುತ್ತಿದ್ದರು. ಆದರೆ ಕೋವಿಡ್ ಸಾಂಕ್ರಾಮಿಕದಿಂದಾಗಿ ಕಳೆದ ವರ್ಷದಿಂದ ವರ್ಚುವಲ್ ಆಗಿ ಯೋಗದ ಮಹತ್ವವನ್ನ ಪ್ರಧಾನಿ ಹೇಳಿಕೊಡುತ್ತಿದ್ದಾರೆ.
2014 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ಮನ್ನಣೆ ದೊರಕಿದ್ದು, 2015 ರಿಂದ ಪ್ರತಿವರ್ಷ ಜೂನ್ 21 ರಂದು ಆಚರಿಸುತ್ತಾ ಬರಲಾಗಿದೆ.