ಕರ್ನಾಟಕ

karnataka

ETV Bharat / bharat

ಮನ್ ಕಿ ಬಾತ್: ಇಂದು ದೇಶದ ಜನತೆಯನ್ನುದ್ದೇಶಿಸಿ ಮೋದಿ ಮನದ ಮಾತು - ಮೋದಿ ಟ್ವಿಟರ್

ಇಂದು ಬೆಳಗ್ಗೆ 11 ಗಂಟೆಗೆ ಮಾಸಿಕ ಮನ್ ಕಿ ಬಾತ್​ ಕಾರ್ಯಕ್ರಮದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.

pm modi
pm modi

By

Published : Dec 26, 2021, 9:11 AM IST

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು 11 ಗಂಟೆಗೆ ಮನ್ ಕಿ ಬಾತ್​ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡುವರು. ಈ ಕುರಿತು ಅವರು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್​-19 ಹೊಸ ರೂಪಾಂತರಿ ತಳಿ ಒಮಿಕ್ರಾನ್ ಕೇಸ್​ಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅವರು ಮಾತನಾಡುವ ಸಾಧ್ಯತೆ ಹೆಚ್ಚಿದೆ.

ನಿನ್ನೆ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್​ ವ್ಯಾಕ್ಸಿನ್​ ನೀಡುವ ಕಾರ್ಯಾರಂಭ ಮಾಡಲಾಗುವುದು. ಇದರ ಜೊತೆಗೆ, ಖಾಯಿಲೆಗಳಿಂದ ಬಳಲುತ್ತಿರುವ 60 ವರ್ಷ ಮೇಲ್ಪಟ್ಟ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಹೆಚ್ಚುವರಿ ಡೋಸ್​​ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದರು.

ABOUT THE AUTHOR

...view details