ದೇಶದಲ್ಲಿ ಕೊರೊನಾ ಆರ್ಭಟ: ಈಗ 8:45ಕ್ಕೆ ದೇಶವನ್ನುದ್ದೇಶಿಸಿ ನಮೋ ಭಾಷಣ - ದೇಶದಲ್ಲಿ ಮಹಾಮಾರಿ ಕೊರೊನಾ
20:11 April 20
ಕೊರೊನಾ ಹತೋಟಿ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ
ನವದೆಹಲಿ:ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8:45ಕ್ಕೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪಿಎಂಒ ಕಚೇರಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದೆ.
ಕಳೆದ ಕೆಲ ದಿನಗಳಿಂದ 2ನೇ ಹಂತದ ಕೋವಿಡ್ ಅಲೆ ಹೆಚ್ಚಾಗಿರುವ ಕಾರಣ ಬಹುತೇಕ ಎಲ್ಲ ರಾಜ್ಯಗಳು ತೊಂದರೆ ಅನುಭವಿಸುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಸಮಸ್ಯೆ ಉಂಟಾಗಿದೆ. ಹೀಗಾಗಿ ನಮೋ ಕೆಲವೊಂದು ಮಹತ್ವದ ಸೂಚನೆ ನೀಡುವ ಸಾಧ್ಯತೆ ಇದೆ.
ನಿನ್ನೆ ತಜ್ಞ ವೈದ್ಯರು ಹಾಗೂ ಫಾರ್ಮಾ ಕಂಪನಿಗಳೊಂದಿಗೆ ಸಂವಾದ ನಡೆಸಿದ್ದ ನಮೋ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದರು. ಇದಾದ ಬಳಿಕ ದೇಶದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ವ್ಯಾಕ್ಸಿನ್ ತೆಗೆದುಕೊಳ್ಳಲು ಅರ್ಹರು ಎಂಬ ನಿರ್ಧಾರ ಕೂಡ ಕೈಗೊಳ್ಳಲಾಗಿದೆ.