ಕರ್ನಾಟಕ

karnataka

ETV Bharat / bharat

ನಾಳೆ 28ನೇ NHRC ದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ

ಈ ಆಯೋಗವು ಯಾವುದೇ ರೀತಿಯ ಮಾನವ ಹಕ್ಕುಗಳ ಉಲ್ಲಂಘನೆಯ ವಿಚಾರಣೆಗಳನ್ನು ನಡೆಸುತ್ತದೆ. ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಪಾವತಿಗಾಗಿ ಸಾರ್ವಜನಿಕ ಅಧಿಕಾರಿಗಳಿಗೆ ಶಿಫಾರಸು ಮಾಡುತ್ತದೆ..

PM Modi to attend 28th NHRC Day programme tomorrow
ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ

By

Published : Oct 11, 2021, 3:31 PM IST

ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಅವರು 28ನೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಅಕ್ಟೋಬರ್ 12ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಭಾಷಣ ಕೂಡ ಮಾಡಲಿದ್ದಾರೆ. UNHRC ಅಧ್ಯಕ್ಷ ಅರುಣ್ ಕುಮಾರ್ ಮಿಶ್ರಾ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. NHRC ಅನ್ನು ಮಾನವ ಹಕ್ಕುಗಳ ಸಂರಕ್ಷಣೆ ಕಾಯಿದೆ 1993ರ ಅಡಿಯಲ್ಲಿ 12 ಅಕ್ಟೋಬರ್, 1993ರಂದು ಮಾನವ ಹಕ್ಕುಗಳ ಪ್ರಚಾರ ಮತ್ತು ರಕ್ಷಣೆಗಾಗಿ ಸ್ಥಾಪಿಸಲಾಯಿತು.

ಈ ಆಯೋಗವು ಯಾವುದೇ ರೀತಿಯ ಮಾನವ ಹಕ್ಕುಗಳ ಉಲ್ಲಂಘನೆಯ ವಿಚಾರಣೆಗಳನ್ನು ನಡೆಸುತ್ತದೆ. ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಪಾವತಿಗಾಗಿ ಸಾರ್ವಜನಿಕ ಅಧಿಕಾರಿಗಳಿಗೆ ಶಿಫಾರಸು ಮಾಡುತ್ತದೆ. ತಪ್ಪು ಮಾಡಿದ ಸಾರ್ವಜನಿಕ ಸೇವಕರ ವಿರುದ್ಧ ಇತರ ಪರಿಹಾರ ಮತ್ತು ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ.

ಓದಿ:ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ.. ಓರ್ವ ಜೆಸಿಒ, ನಾಲ್ವರು ಯೋಧರು ಹುತಾತ್ಮ

ABOUT THE AUTHOR

...view details