ನವದೆಹಲಿ :ಇದೇ ನವೆಂಬರ್ 25 ರಂದು ಲಖನೌ ವಿಶ್ವವಿದ್ಯಾಲಯವು ಶತಮಾನೋತ್ಸವ ಆಚಸಿಕೊಳ್ಳಲಿದ್ದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ಕಚೇರಿಯು (ಪಿಎಂಒ) ಸೋಮವಾರ ತನ್ನ ಅಧಿಕೃತ ಹೇಳಿಕೆ ತಿಳಿಸಿದೆ.
ನ. 25 ರಂದು ಸಂಜೆ 5:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಶತಮಾನೋತ್ಸವದ ಸ್ಮರಣಾರ್ಥ ಹೊಸ ನಾಣ್ಯವನ್ನು ಅವರು ಅನಾವರಣಗೊಳಿಸಲಿದ್ದಾರೆ ಎಂದು ಪಿಎಂಒ ತಿಳಿಸಿದೆ.