ಕರ್ನಾಟಕ

karnataka

ETV Bharat / bharat

ಏಕತಾ ಪ್ರತಿಮೆಗೆ ಸಂಪರ್ಕ ವ್ಯವಸ್ಥೆ : 8 ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಮೋದಿ - ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ

ಪ್ರವಾಸೋದ್ಯಮದ ಅಭಿವೃದ್ಧಿ ಮತ್ತು ಏಕತಾ ಪ್ರತಿಮೆಗೆ ಉತ್ತಮ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ದೇಶದ ವಿವಿಧ ನಗರಗಳಿಂದ ಕೆವಾಡಿಯಾಗೆ ಸಂಪರ್ಕ ಕಲ್ಪಿಸುವ 8 ರೈಲುಗಳಿಗೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್ ನೀಡಲಿದ್ದಾರೆ.

PM Modi to flag off 8 trains
ಪ್ರಧಾನಿ ಮೋದಿ

By

Published : Jan 16, 2021, 7:44 AM IST

ನವದೆಹಲಿ:ಗುಜರಾತ್​ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಉತ್ತಮ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ ಎಂಟು ರೈಲುಗಳಿಗೆ ಜನವರಿ 17 ರಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಹಸಿರು ನಿಶಾನೆ ತೋರಲಿದ್ದಾರೆ.

09103/04 ಕೆವಾಡಿಯಾ-ವಾರಣಾಸಿ ಮಹಾಮಣ ಎಕ್ಸ್‌ಪ್ರೆಸ್ (ವಾರದಲ್ಲಿ ಒಂದು ದಿನ), 02927/28 ದಾದರ್-ಕೆವಾಡಿಯಾ ಎಕ್ಸ್‌ಪ್ರೆಸ್ (ದೈನಂದಿನ), 09247/48 ಅಹಮದಾಬಾದ್-ಕೆವಾಡಿಯಾ ಜನಶತಾಬ್ದಿ ಎಕ್ಸ್‌ಪ್ರೆಸ್ (ದೈನಂದಿನ), 09145/46 ನಿಜಾಮುದ್ದೀನ್ - ಕೆವಾಡಿಯಾ ಎಕ್ಸ್‌ಪ್ರೆಸ್ (ವಾರಕ್ಕೆ 2 ಬಾರಿ) 09105/06 ಕೆವಾಡಿಯಾ - ರೇವಾ ಎಕ್ಸ್‌ಪ್ರೆಸ್ (ವಾರದಲ್ಲಿ ಒಂದು ದಿನ), 09119/20 ಚೆನ್ನೈ - ಕೆವಾಡಿಯಾ ಎಕ್ಸ್‌ಪ್ರೆಸ್ (ವಾರದಲ್ಲಿ ಒಂದು ದಿನ), 09107/08 ಪ್ರತಾಪನಗರ-ಕೆವಾಡಿಯಾ ಎಂಇಎಂಯು ರೈಲು (ದೈನಂದಿನ) ಮತ್ತು 09109/10 ಕೆವಾಡಿಯಾ-ಪ್ರತಾಪನಗರ ಎಂಇಎಂಯು ರೈಲು (ದೈನಂದಿನ) ಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ.

ರೈಲ್ವೆ ಸಚಿವಾಲಯದ ಪ್ರಕಾರ, ಅಹಮದಾಬಾದ್-ಕೆವಾಡಿಯಾ ಜನಶತಾಬ್ದಿ ಎಕ್ಸ್‌ಪ್ರೆಸ್‌ಗೆ ಹೊಸ ಯುಗದ "ವಿಸ್ಟಾ-ಡೋಮ್ ಟೂರಿಸ್ಟ್ ಕೋಚ್" ಒದಗಿಸಲಾಗಿದ್ದು, ಇದು ಸ್ಕೈಲೈನ್‌ನ ವಿಹಂಗಮ ನೋಟವನ್ನು ನೀಡುತ್ತದೆ. ಭಾನುವಾರ ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಹಸಿರು ನಿಶಾನೆ ತೋರಲಾಗುವುದು

ಇವುಗಳಲ್ಲದೆ, ದಾಭೋಯ್-ಚಂದೋಡ್ ಬ್ರಾಡ್ ಗೇಜ್ ರೈಲ್ವೆ ಮಾರ್ಗ, ಚಂದೋಡ್-ಕೆವಾಡಿಯಾ ಹೊಸ ಬ್ರಾಡ್ ಗೇಜ್ ರೈಲ್ವೆ ಮಾರ್ಗ, ಹೊಸದಾಗಿ ವಿದ್ಯುದ್ದೀಕರಿಸಿದ ಪ್ರತಾಪನಗರ- ಕೆವಾಡಿಯಾ ವಿಭಾಗ ಮತ್ತು ದಬೋಯಿ, ಚಂದೋಡ್ ಮತ್ತು ಕೆವಾಡಿಯಾದ ಹೊಸ ನಿಲ್ದಾಣ ಕಟ್ಟಡಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಕೂಡ ಉಪಸ್ಥಿತರಿರಲಿದ್ದಾರೆ.

ABOUT THE AUTHOR

...view details