ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತ-ಮಧ್ಯ ಏಷ್ಯಾ ಶೃಂಗಸಭೆಯನ್ನು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ. ಈ ವರ್ಚುಯಲ್ ಈವೆಂಟ್ನಲ್ಲಿ ಕಜಕಿಸ್ತಾನ್, ಕಿರ್ಗಿಜ್ ಗಣರಾಜ್ಯ, ತಜಿಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷರು ಭಾಗವಹಿಸಲಿದ್ದಾರೆ.
ಈ ಶೃಂಗಸಭೆಯು ಭಾರತ - ಮಧ್ಯ ಏಷ್ಯಾದ ನಾಯಕರು ಸಮಗ್ರ ಮತ್ತು ನಿರಂತರ ಪಾಲುದಾರಿಕೆಗೆ ನೀಡಿದ ಪ್ರಾಮುಖ್ಯತೆಯ ಸಂಕೇತವಾಗಿದೆ.