ಕರ್ನಾಟಕ

karnataka

ETV Bharat / bharat

ಅಖಿಲ ಭಾರತ ಮೇಯರ್‌ಗಳ ಸಮ್ಮೇಳನ : ಇಂದು ಪ್ರಧಾನಿ ಮೋದಿ ಉದ್ಘಾಟನೆ - ಪ್ರಧಾನಿ ನರೇಂದ್ರ ಮೋದಿ

ಮೇಯರ್‌ಗಳ ಸಮ್ಮೇಳನದ ಆಶಯ 'ನ್ಯೂ ​​ಅರ್ಬನ್ ಇಂಡಿಯಾ' ಎಂಬುದಾಗಿದೆ. ನಮ್ಮ ನಾಗರಿಕರ ಅನುಕೂಲಕ್ಕಾಗಿ ನಾಗರಿಕ ಆಡಳಿತದಲ್ಲಿ ಉತ್ತಮ ಅಭ್ಯಾಸಗಳನ್ನು ರೂಡಿಸಿಕೊಳ್ಳುವುದು ಸಮ್ಮೇಳನದ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ..

PM Modi
ನರೇಂದ್ರ ಮೋದಿ

By

Published : Dec 17, 2021, 11:55 AM IST

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) 'ನ್ಯೂ ಅರ್ಬನ್ ಇಂಡಿಯಾ' ಎಂಬ ಶೀರ್ಷಿಕೆಯ ಅಖಿಲ ಭಾರತ ಮೇಯರ್‌ಗಳ ಸಮ್ಮೇಳನವನ್ನು ವಾಸ್ತವಿಕವಾಗಿ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಪುರಿ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಭಾಗವಹಿಸಲಿದ್ದಾರೆ.

ಪ್ರಧಾನಮಂತ್ರಿಗಳ ಕಚೇರಿ (PMO) ನೀಡಿರುವ ಮಾಹಿತಿಯ ಪ್ರಕಾರ ಪ್ರಕಾರ, ಉತ್ತರಪ್ರದೇಶದ ನಗರಾಭಿವೃದ್ಧಿ ಇಲಾಖೆಯು ವಾರಣಾಸಿಯಲ್ಲಿ ಸಮ್ಮೇಳನವನ್ನು ಆಯೋಜಿಸುತ್ತಿದೆ. ಸಮ್ಮೇಳನಕ್ಕೆ 'ನ್ಯೂ ​​ಅರ್ಬನ್ ಇಂಡಿಯಾ' ಎಂಬ ಶೀರ್ಷಿಕೆ ಇಡಲಾಗಿದೆ.

ನಗರ ಪ್ರದೇಶಗಳಲ್ಲಿ ವಾಸಿಸಲು ಅನುಕೂಲವಾಗುವಂತೆ ಮಾಡುವುದು ಪ್ರಧಾನಮಂತ್ರಿಗಳ ನಿರಂತರ ಪ್ರಯತ್ನವಾಗಿದೆ. ಶಿಥಿಲಗೊಂಡ ನಗರದ ಮೂಲಸೌಕರ್ಯಗಳ ಕೊರತೆಯ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಅನೇಕ ಯೋಜನೆಗಳು ಮತ್ತು ಉಪಕ್ರಮಗಳನ್ನು ಪ್ರಾರಂಭಿಸಿದೆ.

ಈ ಪ್ರಯತ್ನಗಳ ವಿಶೇಷ ಮಾದರಿ ಉತ್ತರಪ್ರದೇಶ ರಾಜ್ಯವಾಗಿದ್ದು, ಕಳೆದ 5 ವರ್ಷಗಳಲ್ಲಿ ನಗರವು ಉತ್ತಮ ಪ್ರಗತಿ ಮತ್ತು ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದು ಪಿಎಂಒ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಿಧಾನಸಭೆ ಚುನಾವಣೆ 2022 :ಮುಂದಿನ ವರ್ಷ ಉತ್ತರಪ್ರದೇಶ ಮತ್ತು ಉತ್ತರಾಖಂಡದಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಯುಪಿ ಮತ್ತು ಉತ್ತರಾಖಂಡದ ಸುಮಾರು 45 ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಅತ್ಯಂತ ಮಹತ್ವದ್ದಾಗಿದೆ. ಬೆಳಗ್ಗೆ 9 ಗಂಟೆಗೆ ಎಲ್ಲಾ ಸಂಸದರನ್ನು ಉಪಹಾರಕ್ಕಾಗಿ ಪ್ರಧಾನಿ ನಿವಾಸಕ್ಕೆ ಆಹ್ವಾನಿಸಲಾಗಿದೆ. ಈ ವೇಳೆ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಕೂಡ ಉಪಸ್ಥಿತರಿರುವರು ಎಂದು ತಿಳಿದು ಬಂದಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಿವಿಧ ರಾಜ್ಯಗಳ ಬಿಜೆಪಿ ಸಂಸದರೊಂದಿಗೆ ಪ್ರಧಾನಿ ಮೋದಿ ನಡೆಸುತ್ತಿರುವ 4ನೇ ಸಭೆ ಇದಾಗಿದೆ ಎಂದು ಮೂಲಗಳು ತಿಳಿಸಿವೆ. ಈವರೆಗೆ ಮೋದಿ ಈಶಾನ್ಯ ರಾಜ್ಯಗಳು, ದಕ್ಷಿಣ ರಾಜ್ಯಗಳು ಮತ್ತು ಮಧ್ಯಪ್ರದೇಶದ ಬಿಜೆಪಿ ಸಂಸದರೊಂದಿಗೆ ಸಭೆ ನಡೆಸಿದ್ದಾರೆ ಎಂದು ಅವರು ಹೇಳಿದರು.

ಇತರ ಸಂಸದರೊಂದಿಗೆ ಪ್ರಧಾನಿ ಮೋದಿ ಸಭೆ :ಉತ್ತರಪ್ರದೇಶದ ಸುಮಾರು 40 ಬಿಜೆಪಿ ಸಂಸದರೊಂದಿಗೆ ಪ್ರಧಾನಿ ಮೋದಿ ಇಂದು ಸಭೆ ನಡೆಸಿದ್ದು, ನಂತರ ರಾಜ್ಯದ ಉಳಿದ ಸಂಸದರ ಜತೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ನಡೆಯಲಿರುವ ಸಭೆಯಲ್ಲಿ ಉತ್ತರಾಖಂಡದ 40 ಸಂಸದರ ಹೊರತಾಗಿ ಉತ್ತರಾಖಂಡದ ಐವರು ಸಂಸದರೂ ಭಾಗವಹಿಸಲಿದ್ದಾರೆ.

ಇದನ್ನೂ ಓದಿ:ಪ್ರತಿಭಟನೆ ಕೈ ಬಿಟ್ಟರೂ ಕೇಂದ್ರವನ್ನು ಬಿಡದ ರಾಕೇಶ್ ಟಿಕಾಯತ್​: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ರೈತ ಮುಖಂಡ

ABOUT THE AUTHOR

...view details