ಅಹಮದಾಬಾದ್: ಭಾರತ ಸ್ವಾತಂತ್ರ್ಯದ 75 ವರ್ಷಗಳ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಅಹಮದಾಬಾದಿನ ಸಾಬರಮತಿ ಆಶ್ರಮದಿಂದ ಗುರುವಾರ 'ಆಜಾದಿ ಕಾ ಅಮೃತ್ ಮಹೋತ್ಸವ' ಉದ್ಘಾಟಿಸಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.
'ಆಜಾದಿ ಕಾ ಅಮೃತ್ ಮಹೋತ್ಸವ'ಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ - ಗುಜರಾತ್‌ನ ಅಹಮದಾಬಾದ್‌ನ ಸಬರಮತಿ
ಭಾರತ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ನೆನಪಿಗಾಗಿ ಸರ್ಕಾರವು ಆಯೋಜಿಸಲಿರುವ ಕಾರ್ಯಕ್ರಮಗಳ ಸರಣಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ಅಮೃತ ಮಹೋತ್ಸವವು ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ನೆನಪಿಗಾಗಿ ಸರ್ಕಾರವು ಆಯೋಜಿಸಲಿರುವ ಕಾರ್ಯಕ್ರಮಗಳ ಸರಣಿಯಾಗಿದೆ. ಇದನ್ನು ಜನ-ಉತ್ಸವವಾಗಿ ಆಚರಿಸಲಾಗುವುದು. ಸ್ವಾತಂತ್ರ್ಯ ಬಂದು ಆಗಸ್ಟ್ 15, 2022ಕ್ಕೆ 75 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ಮಾರ್ಚ್ 12 ರಿಂದ ಕರ್ಟನ್ ರೈಸರ್ ಚಟುವಟಿಕೆಗಳು ಪ್ರಾರಂಭವಾಗುತ್ತಿವೆ.
ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್, "ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿರುವ ಪಾದಯಾತ್ರೆಯು ಅಹಮದಾಬಾದಿನ ಸಾಬರಮತಿ ಆಶ್ರಮದಿಂದ ನವಸಾರಿಯ ದಂಡಿ ಗೆ 241 ಮೈಲುಗಳಷ್ಟು ಪ್ರಯಾಣಿಸಲಿದೆ ಮತ್ತು ಏಪ್ರಿಲ್ 5 ರಂದು ಕೊನೆಗೊಳ್ಳುತ್ತದೆ ಎಂದರು."