ಕರ್ನಾಟಕ

karnataka

By

Published : Sep 11, 2021, 9:08 AM IST

Updated : Sep 11, 2021, 9:30 AM IST

ETV Bharat / bharat

ಅಹಮದಾಬಾದ್​ನಲ್ಲಿ ಸರ್ದಾರ್​ಧಾಮ್ ಭವನ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ಅಹಮದಾಬಾದ್​ನಲ್ಲಿ ಸರ್ದಾರ್​ಧಾಮ್​ ಭವನ ಉದ್ಘಾಟಿಸಲಿದ್ದಾರೆ.

ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಳಗ್ಗೆ 11 ಗಂಟೆಗೆ ಅಹಮದಾಬಾದ್​ನಲ್ಲಿ ಸರ್ದಾರ್​ಧಾಮ್​ ಭವನ (Sardardham Bhavan)ವನ್ನು ಉದ್ಘಾಟಿಸಲಿದ್ದಾರೆ. ಸರ್ದಾರ್ಧಂ 2 ನೇ ಹಂತದ ಕನ್ಯಾ ಛತ್ರಾಲಯ (ಬಾಲಕಿಯರ ಹಾಸ್ಟೆಲ್)ದ ಭೂಮಿ ಪೂಜೆಯನ್ನೂ ನೆರವೇರಿಸಲಿದ್ದಾರೆ.

ಸರ್ದಾರ್​ಧಾಮ್, ಶೈಕ್ಷಣಿಕ ಮತ್ತು ಸಾಮಾಜಿಕ ಪರಿವರ್ತನೆ, ಸಮಾಜದ ದುರ್ಬಲ ವರ್ಗಗಳ ಏಳಿಗೆ ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.

ಅಹಮದಾಬಾದ್‌ನಲ್ಲಿ ಸ್ಥಾಪಿಸಲಾಗಿರುವ ಸರ್ದಾರ್​ಧಾಮ್ ಭವನವು ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ. 2 ಸಾವಿರ ವಿದ್ಯಾರ್ಥಿನಿಯರು ಉಳಿದುಕೊಳ್ಳಲು ಅನುಕೂಲವಾಗುವ ಕನ್ಯಾ ಛತ್ರಾಲಯವನ್ನು ನಿರ್ಮಿಸಲಾಗುತ್ತಿದೆ.

ಇದನ್ನೂ ಓದಿ: ರಾಷ್ಟ್ರಪತಿಯಿಂದ ಯುಪಿಯಲ್ಲಿ ರಾಷ್ಟ್ರೀಯ ಕಾನೂನು ಕಾಲೇಜು, ಹೈಕೋರ್ಟ್ ಕಟ್ಟಡಗಳಿಗೆ ಶಂಕುಸ್ಥಾಪನೆ

ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಕೂಡ ಭಾಗವಹಿಸಲಿದ್ದಾರೆ.

Last Updated : Sep 11, 2021, 9:30 AM IST

ABOUT THE AUTHOR

...view details