ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಈಶಾನ್ಯದ ಎಂಟು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಾಳೆ ಸಂವಾದ ನಡೆಸಲಿದ್ದಾರೆ. ಈ ಭಾಗದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಚರ್ಚಿಸಲಿದ್ದಾರೆ.
ಈಶಾನ್ಯ ರಾಜ್ಯಗಳ ಸಿಎಂಗಳೊಂದಿಗೆ ನಾಳೆ ಮೋದಿ ವರ್ಚುವಲ್ ಮಾತುಕತೆ - ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ಮೋದಿ ಅವರು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಾಳೆ ಕೋವಿಡ್ -19 ಪರಿಸ್ಥಿತಿ ಕುರಿತು ಚರ್ಚಿಸಲಿದ್ದಾರೆ.
PM Modi to interact with CMs of north-eastern states on Covid situation Tuesday
ಅಸ್ಸೋಂ, ನಾಗಾಲ್ಯಾಂಡ್, ತ್ರಿಪುರ, ಸಿಕ್ಕಿಂ, ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೋದಿ ಸಂವಹನ ನಡೆಸಲಿದ್ದಾರೆ.
ದೇಶದ ಹೆಚ್ಚಿನ ಭಾಗಗಳು ಕೋವಿಡ್ ಸಂಖ್ಯೆಯಲ್ಲಿ ಸ್ಥಿರವಾದ ಕುಸಿತ ಕಂಡಿದ್ದರೂ, ಈಶಾನ್ಯ ಪ್ರದೇಶದಲ್ಲಿ ಪ್ರಕರಣಗಳ ಸಂಖ್ಯೆಯು ರಾಷ್ಟ್ರವ್ಯಾಪಿ ಪ್ರವೃತ್ತಿಗೆ ಅನುಗುಣವಾಗಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಮೋದಿ ಮಾತುಕತೆ ನಡೆಸಲಿದ್ದಾರೆ.